Karnataka DG,IGP: ಕರ್ನಾಟಕ ಡಿಜಿ, ಐಜಿಪಿಯಾಗಿ ಎಂಎ ಸಲೀಂ ನೇಮಕ
Karnataka DG,IGP: ಕರ್ನಾಟಕದ ಡಿಜಿ, ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಇವರು ಯಾವ ಬ್ಯಾಚ್ ಹಾಗೂ ಯಾರ ಸ್ಥಾನಕ್ಕೆ ನೇಮಕ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದ ಒಳಗೆ ನಿಯಮಿತ ಡಿಜಿಪಿಯನ್ನು ನೇಮಕ ಮಾಡಲಾಗುವುದು ಎಂದು ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆಯೇ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ಬಳಿಕ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡರು.
ಡಾ.ಸಲೀಂ ಸದ್ಯ ಇದೀಗ ಸಿಐಡಿಯ ಡಿಜಿಪಿ ಆಗಿದ್ದಾರೆ. ಜೊತೆಗೆ ರಾಜ್ಯದ ಡಿಜಿಪಿ, ಐಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂಡಿದ್ದಾರೆ. ಹೈಕೋರ್ಟ್ ಈ ಅರ್ಜಿಯನ್ನ ವಜಾಗೊಳಿಸಿದ್ದು, ಶೀಗ್ರದಲ್ಲೇ ಸರ್ಕಾರವು ಡಿಜಿಪಿ ಹುದ್ದೆಗೆ ನೇಮಕ ಮಾಡುವುದಾಗಿ ಹೇಳಿತ್ತು. ಅದಂತೆಯೇ ಇದೀಗ ಆ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಐಪಿಎಸ್ ನಿಯಮಗಳು 2016ರ ಪ್ರಕಾರ, ಈ ಹುದ್ದೆಯು ಅಪೆಕ್ಸ್ ಸ್ಕೇಲ್, ಹಂತ-17ರ ಅಡಿಯಲ್ಲಿ 2,25,000 ರೂಪಾಯಿ ನಿಗದಿತ ವೇತನವನ್ನು ಹೊಂದಿದೆ ಅಂತಾ ಆದೇಶದಲ್ಲಿ ತಿಳಿಸಲಾಗಿದೆ. ಮುಂದಿನ ಆದೇಶದವರೆಗೆ ಡಾ.ಸಲೀಂ ಅವರು ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.
ಕಾಯಂ ಪೊಲೀಸ್ ಡಿಜಿ-ಐಜಿಪಿ ನೇಮಕ ಮಾಡುವ ಕುರಿತು ಇನ್ನೊಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿತ್ತು.ಪ್ರಭಾರ ಡಿಜಿ, ಐಜಿಪಿಯನ್ನಾಗಿ ಎಂ.ಎ.ಸಲೀಂ ಅವರನ್ನು ನೇಮಕ ಮಾಡಿರುವ ಆದೇಶ ರದ್ದು ಕೋರಿ ವಕೀಲೆ ಸುಧಾ ಕಾಟ್ವಾ ಸಲ್ಲಿಕೆ ಮಾಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ.ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಈ ಸ್ಪಷ್ಟನೆ ನೀಡಿತ್ತು.
ಇನ್ನು ಸರ್ಕಾರ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಸಂಬಂಧ ಆಗಸ್ಟ್ 26ರಂದು ಕೇಂದ್ರ ಲೋಕಸೇವಾ ಆಯೋಗದ ಆಯ್ಕೆ ಸಮಿತಿ ಸಭೆ ನಡೆದಿದೆ. ಈ ಸಭೆಯ ಶಿಫಾರಸನ್ನು ಆಧರಿಸಿ ರಾಜ್ಯದ ಕಾಯಂ ಪೊಲೀಸ್ ಮಹಾನಿರ್ದೇಶಕರನ್ನು ನೇಮಕ ಮಾಡುವ ಬಗ್ಗೆ ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಪೊಲೀಸ್ ಮಹಾನಿರ್ದೇಶಕರ ನೇಮಕ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸಿದೆ. ಆದ್ದರಿಂದ ಅರ್ಜಿ ವಿಚಾರಣೆ ಮುಂದುವರೆಸುವ ಅವಶ್ಯಕತೆಯಿಲ್ಲ ಎಂದು ಹೇಳಿ ಅರ್ಜಿ ಇತ್ಯರ್ಥಪಡಿಸಿತ್ತು.












Click it and Unblock the Notifications