ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಷರ ಗಾರುಡಿಗ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ

|
Google Oneindia Kannada News

ಬೆಂಗಳೂರು, ನವೆಂಬರ್ 13: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತಕ್ಕೊಳಗಾದ ಬೆಳಗೆರೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.ಹಾಯ್ ಬೆಂಗಳೂರ್ ವಾರಪತ್ರಿಕೆ ಹಾಗೂ 'ಓ ಮನಸೇ' ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದರು.

ಜೊತೆಗೆ ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು.

ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆ ಯ ಸಂಸ್ಥಾಪಕರು, ಹಾಯ್ ಬೆಂಗಳೂರ್' ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.

Ravi Belagere

ಅವರು 1995ರಲ್ಲಿ ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್‌ನ್ನು ಆರಂಭಿಸಿದ್ದರು. ಕಥಾಸಂಕಲನ, ಅನುವಾದ, ಅಂಕಣ ಬರಹಗಳು, ಜೀವನ ಕಥೆ ಸೇರಿ ಸುಮಾರು 70ಕ್ಕೂ ಹೆಚ್ಚು ಪುಸ್ತಕಗಳು ಇಲ್ಲಿಯವರೆಗೆ ಪ್ರಕಟಗೊಂಡಿದೆ.

ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿದಂತೆ ಅನೇಕ ಜನಪ್ರಿಯ ಕೃತಿಗಳನ್ನು ರಚಿಸಿದ್ದರು.

Recommended Video

ರವಿ ಬೆಳಗೆರೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ R ಅಶೋಕ್ | Oneindia Kannada

ಇದೀಗ ಅವರ ಅಂತಿಮ ದರ್ಶನಕ್ಕೆ ಅವಕಾಶವನ್ನು ಪ್ರಾರ್ಥನಾ ಶಾಲೆಯಲ್ಲಿ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ರಾಜ್ಯೋತ್ಸವ ಪ್ರಶಸ್ತಿ, ಜೀವಮಾನದ ಸಾಧನೆ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ.

English summary
Senior Journalist And Writer Ravi Belagere Is No More, He Died Today Morning due to Severe Heart Attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X