ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡದ ಹಿರಿಯ ಸಾಹಿತಿ ನಾಡೋಜ ಕೊ.ಚೆನ್ನಬಸಪ್ಪ ನಿಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರ ಕೊ.ಚೆನ್ನಬಸಪ್ಪ ಶನಿವಾರ ಬೆಳಿಗ್ಗೆ ನಿಧನರಾದರು.

ಕೊಡವರನ್ನು ನಾನು ಅಪಮಾನಿಸಿಲ್ಲ : ಕೋ.ಚ ಕೊಡವರನ್ನು ನಾನು ಅಪಮಾನಿಸಿಲ್ಲ : ಕೋ.ಚ

ಅವರಿಗೆ 96 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟಿಪ್ಪು ಜಯಂತಿ ಆಚರಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.

Senior Kannada writer Ko Channabasappa passes away

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಸಮೀಪದ ಆಲೂರಿನಲ್ಲಿ ಹುಟ್ಟಿದ ಚನ್ನಬಸಪ್ಪ ನಿವೃತ್ತ ನ್ಯಾಯಾಧೀಶರಾಗಿದ್ದರು. ಖಜಾನೆ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ರಕ್ತತರ್ಪಣ, ಹಿಂದಿರುಗಿ ಬರಲಿಲ್ಲ, ನ್ಯಾಯಾಲಯದ ಸತ್ಯಕಥೆಗಳು, ಪ್ರಾಣಪಕ್ಷಿ, ಹೃದಯ ನೈವೇದ್ಯ ಮುಂತಾದ ಹಲವು ಕೃತಿಗಳನ್ನು ಅವರು ರಚಿಸಿದ್ದರು.

ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದ ಕೊಚೆ ಸೆರೆವಾಸ ಅನುಭವಿಸಿದ್ದರು. ಬಿಡುಗಡೆಯ ನಂತರ ಬಿಎ ಮತ್ತು ಬೆಳಗಾವಿ ಕಾಲೇಜಿನಿಂದ ಲಾ ಪದವಿ ಪಡೆದಿದ್ದರು. ಚರಿತ್ರೆ ಮತ್ತು ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಕೂಡ ಪಡೆದರು.

ಕತೆ, ಕವನ, ವಿಮರ್ಶೆ ಸೇರಿದಂತೆ ಕನ್ನಡದ ನಾನಾ ಸಾಹಿತ್ಯ ಪ್ರಕಾರಗಳಲ್ಲಿತಮ್ಮನ್ನು ತೊಡಗಿಸಿಕೊಂಡಿದ್ದ ಕೊಚೆ ಅವರು ಕುವೆಂಪು ಸಾಹಿತ್ಯದ ಆಳವಾದ ಅಧ್ಯಯನ ಮಾಡಿದ್ದವರು.

ಕೊಚೆ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು, "ಕರ್ನಾಟಕ ಏಕೀಕರಣದ ಹೋರಾಟಗಾರ, ಕ‌ನ್ನಡ ಪ್ರಜ್ಞೆಯನ್ನು ಉಸಿರಾಗಿಸಿಕೊಂಡ ಹಿರಿಜೀವ, ಕುವೆಂಪು ಅವರ ಪರಮಾಪ್ತ ಶಿಷ್ಯ, ವೈಯಕ್ತಿಕವಾಗಿ ಸದಾ ನನಗೆ ಮಾರ್ಗದರ್ಶನ ನೀಡುತ್ತಿದ್ದ ಹಿತೈಷಿ ಕೋ.ಚೆನ್ನಬಸಪ್ಪನವರ ಅಗಲಿಕೆಯ ಸುದ್ದಿ ಆಘಾತವನ್ನುಂಟು ಮಾಡಿದೆ. ಆ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ" ಎಂದು ಟ್ವೀಟ್ ಮಾಡಿದ್ದಾರೆ.

ಕೊಚೆ ನಿಧನಕ್ಕೆ ಕರ್ನಾಟಕ ಸಾಹಿತ್ಯ ಕ್ಷೇತ್ರ ಮತ್ತು ಅವರ ಅಭಿಮಾನಿ ಬಳಕ ಸಂತಾಪ ವ್ಯಕ್ತಪಡಿಸಿದೆ.

English summary
Senior Kannada writer Ko Chennabasappa passes away. He was suffering from age old health issues. Was undergoing tretment in Rammaiah hospital Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X