ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಧಾರವಾಡ, ಮಾರ್ಚ್‌ 15: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ (92) ಅವರು ನಿಧನರಾಗಿದ್ದಾರೆ. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ ಹಾಗೂ ಡಾ. ಪಂಚಾಕ್ಷರಿ ಹಿರೇಮಠ (92) ಶುಕ್ರವಾರ ನಿಧನ ಹೊಂದಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ಅವರು, ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933ರ ಜ. 6ರಂದು ಜನಿಸಿದ ಪಂಚಾಕ್ಷರಿ ಹಿರೇಮಠ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅಪ್ಪಟ ದೇಶಪ್ರೇಮಿ, ಸ್ವಾತಂತ್ರ‍್ಯ ಹೋರಾಟಗಾರ ಹಾಗೂ ಬಹುಭಾಷಾ ವಿಶಾರದರು. ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ವಾಗ್ಮಿಯಾಗಿದ್ದರು. ಹಿರೇಮಠರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ (ಮಾರ್ಚ್ 15 ) ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Senior Kannada Writer Panchakshari Hiremath No More

ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊAಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

ಸಿಎಂ ಸಿದ್ದರಾಮಯ್ಯ ಸಂತಾಪ

ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+