• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಿರಿಯ ಮುಖಂಡ ಎಸ್ ಎಂ ಕೃಷ್ಣ ಜನ್ಮದಿನ: ಶುಭಾಶಯಗಳ ಮಹಾಪೂರ

|

ಬೆಂಗಳೂರು, ಮೇ 1: ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಅವರು ಇಂದು (ಮೇ 1) 87ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ.

ಎಸ್.ಎಂ. ಕೃಷ್ಣ ಅವರ ಜನ್ಮದಿನದ ಪ್ರಯುಕ್ತ ರಾಜ್ಯದ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿವೆ.

1932ರ ಮೇ 1ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ ಎಸ್ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹಿನ್ನೆಲೆಗೆ ಸರಿದಿದ್ದ ಅವರು, 2017ರ ಜನವರಿಯಲ್ಲಿ ಕಾಂಗ್ರೆಸ್ ತೊರೆದು ಮಾರ್ಚ್‌ ತಿಂಗಳಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಅಧಿಕಾರಕ್ಕೆ ಬಿಜೆಪಿಗೆ ಬಂದಿಲ್ಲ, ವಂಶಪಾರಂಪರ್ಯ ಆಡಳಿತ ಬೇಡವಾಗಿತ್ತು: ಎಸ್‌ಎಂ ಕೃಷ್ಣ

ಬಿಜೆಪಿಯಲ್ಲಿ ಯಾವುದೇ ಅಧಿಕೃತ ಹುದ್ದೆ ಪಡೆದುಕೊಳ್ಳದೆ ಇದ್ದರೂ ಅವರು ಪಕ್ಷದ ಕೆಲವು ಸಮಾರಂಭಗಳಲ್ಲಿ ಹಾಜರಾಗುತ್ತಿದ್ದಾರೆ. ಅವರ ಜನ್ಮದಿನಕ್ಕೆ ಪಕ್ಷಭೇದ ಮರೆತು ರಾಜಕಾರಣಿಗಳು, ಉದ್ಯಮಿಗಳು, ಕಲಾವಿದರು ಮತ್ತು ಜನಸಾಮಾನ್ಯರು ಶುಭಾಶಯಗಳನ್ನು ಕೋರಿದ್ದಾರೆ. ಫೇಸ್‌ಬುಕ್, ಟ್ವಿಟ್ಟರ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಅವರಿಗೆ ಶುಭ ಹಾರೈಸಿದ್ದಾರೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಂತಾದವರು ಶುಭ ಆಶಯಗಳನ್ನು ಹಂಚಿಕೊಂಡಿದ್ದಾರೆ.

ಕುಮಾರಸ್ವಾಮಿ ಶುಭಾಶಯ

ಕರ್ನಾಟಕದ ಅತ್ಯಂತ ಹಿರಿಯ ರಾಜಕಾರಣಿ ಮತ್ತು ಮುತ್ಸದ್ಧಿ ಶ್ರೀ ಎಸ್.ಎಂ. ಕೃಷ್ಣ ಅವರು ಇಂದು 87ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಹಾಗೂ ಸಂತೋಷಕರ ಜೀವನವನ್ನು ದೇವರು ಅನುಗ್ರಹಿಸಲಿ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ-ಎಸ್.ಎಂ.ಕೃಷ್ಣ ಭೇಟಿ: ಸುಮಲತಾಗೆ ಬೆಂಬಲದ ಮಾತುಕತೆ

ಮನೆಗೆ ತೆರಳಿ ಶುಭ ಹಾರೈಕೆ

ರಾಜಕೀಯ ಮುತ್ಸದ್ಧಿಗಳು, ಪಕ್ಷದ ಹಿರಿಯ ಮುಖಂಡರು ಆದ ಮಾನ್ಯ ಶ್ರೀ ಎಸ್.ಎಂ.ಕೃಷ್ಣ ಅವರ ಹುಟ್ಟುಹಬ್ಬ ಇಂದು. ಅವರ ನಿವಾಸಕ್ಕೆ ಪಕ್ಷದ ಹಲವಾರು ಮುಖಂಡರ ಜೊತೆಗೆ ತೆರಳಿ ಶುಭಾಶಯ ಕೋರಲಾಯಿತು. ಇವರು ಹೀಗೆ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿ ಸದಾ ನಗು ನಗುತ್ತಾ ಸುಖ, ಸಂತೋಷದಿಂದ ಬಾಳಿ ಬದುಕಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ತೊರೆದಿದ್ದಕ್ಕೆ ಕಾರಣ ಬಿಚ್ಚಿಟ್ಟ ಎಸ್‌ ಎಂ ಕೃಷ್ಣ

ಲಿಂಬಾಳಿ ಶುಭಾಶಯ

ಹಿರಿಯ ನಾಯಕರು, ನಮ್ಮೆಲ್ಲರಿಗೂ ಮಾರ್ಗದರ್ಶಕರು ಆದ ಶ್ರೀ ಎಸ್.ಎಂ.ಕೃಷ್ಣ ಅವರ ಜನ್ಮದಿನದ ಅಂಗವಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಹಲವು ಮುಖಂಡರ ಜೊತೆಗೆ ಅವರ ನಿವಾಸಕ್ಕೆ ತೆರಳಿ ಶುಭ ಕೋರಿದೆ. ಇವರಿಗೆ ದೇವರು ಉತ್ತಮ ಆರೋಗ್ಯ, ಮತ್ತಷ್ಟು ಸುಖ, ನೆಮ್ಮದಿ ಕರುಣಿಸಲಿ ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಪೋಸ್ಟ್ ಮಾಡಿದ್ದಾರೆ.

ಅಶ್ವತ್ಥ್ ನಾರಾಯಣ ಶುಭಕಾಮನೆ

ಮಾಜಿ ಸಚಿವರು ಹಿರಿಯ ರಾಜಕೀಯ ಧುರೀಣರು ಮತ್ತು ಬಿಜೆಪಿ ನಾಯಕರಾದ ಶ್ರೀ ಎಸ್.ಎಂ. ಕೃಷ್ಣ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎ್ ಯಡಿಯೂರಪ್ಪರವರು ಮತ್ತು ಇತರ ಇತರ ರಾಜ್ಯ ಬಿಜೆಪಿ ನಾಯಕರೊಂದಿಗೆ ಅವರ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಲಾಯಿತು ಎಂದು ಶಾಸಕ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಪರಮೇಶ್ವರ್ ಹಾರೈಕೆ

ರಾಜ್ಯದ ಹಿರಿಯ ರಾಜಕಾರಣಿ‌ ಹಾಗೂ ಮಾಜಿ‌ ಮುಖ್ಯಮಂತ್ರಿಗಳಾದ ಶ್ರೀ ಎಸ್ ಎಂ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು‌ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Senior leader of BJP and former Union Minister in UPA government SM Krishna turns 87 on May 1. Chief Minister HD Kumaraswamy, DCM Dr G Parameshwar sent thier wished to him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more