BY Vijayendra: ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಶುಭಕೋರಿದ ಘಟಾನುಘಟಿ ನಾಯಕರು

ಬೆಂಗಳೂರು, ನವೆಂಬರ್‌ 10: ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮೂಲಕ ಶುಭ ಕೋರಿದ ಕುಮಾರಸ್ವಾಮಿ ಅವರು, ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಶ್ರೀ ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

state-president-b-y-vijayendra

ಇನ್ನೂ ಕಟೀಲ್‌ ಶುಭ ಕೋರಿದ್ದು, ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ನಿಯುಕ್ತಿಗೊಳಿಸಿದ್ದಾರೆ. ಅಭಿನಂದನೆಗಳು, ನಿಮ್ಮ ನೇತೃತ್ವದಲ್ಲಿ ಪಕ್ಷ ಸಂಘಟನೆಯು ಮತ್ತಷ್ಟು ಬಲಗೊಂಡು ಉನ್ನತಿಯನ್ನು ಸಾಧಿಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಶುಭಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಕೋರಿದ್ದು, ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದಗೌಡ ಅವರು ಶುಭಕೋರಿದ್ದು, ಭಾರತೀಯ ಜನತಾ ಪಾರ್ಟಿ ಕರ್ನಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಹೃತ್ಫೂರ್ವಕ ಅಭಿನಂದನೆಗಳು. ಪಕ್ಷವು ತಮ್ಮ ಅವಧಿಯಲ್ಲಿ ಸಂಘಟನಾತ್ಮಕ ಬಲಗೊಂಡು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಅತ್ಯಂತ ಯಶಸ್ಸನ್ನು ಗಳಿಸಲೆಂದು ಶುಭಹಾರೈಸುತ್ತೇನೆ.

ಪಕ್ಷದ ಬಲವರ್ಧನೆಗೆ ಬಿ.ವೈ.ವಿಜಯೇಂದ್ರ ಅವರೊಂದಿಗೆ ನಾವೆಲ್ಲರೂ ಜೊತೆಯಲ್ಲಿದ್ದು, ಪಕ್ಷ ಸಂಘಟನೆಗೆ ನನ್ನ ಸಂಪೂರ್ಣವಿದೆ ಎಂದು ತಿಳಿಸುತ್ತಾ, ಮತ್ತೊಮ್ಮೆ ವಿಜಯೇಂದ್ರ ರವರಿಗೆ ಶುಭಹಾರೈಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಟ್ವೀಟ್‌ ಮೂಲಕ ಶುಭಕೋರಿದ್ದು, ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ವೈ. ವಿಜಯೇಂದ್ರ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಚಿವ ಆರ್‌ ಅಶೋಕ್‌ ಶುಭಜಕೋರಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಆಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೂ ಧನ್ಯವಾದಗಳು. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಯುವಕರಿಗೆ ಮನ್ನಣೆ ನೀಡಲಾಗಿದೆ. ಜನರು ಹೊಸತನ ಕೇಳುತ್ತಿದ್ದು, ವಿಜಯೇಂದ್ರ ರಾಜ್ಯಧ್ಯಕ್ಷರಾಗಿ ನೇಮಕವಾಗಿರುವುದು ಪಕ್ಷದ ದೃಷ್ಟಿಯಿಂದ ಅನುಕೂಲವಾಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ಶುಭಕೋರಿದ್ದಾರೆ, ಯುವಕರನ್ನೆ ಸೆಳೆಯಲು ಯುವಕರನ್ನ ನೇಮಕಮಾಡಲಾಗಿದೆ. ಯುವಕರಿಗೆ ಮನ್ನಣೆ ಹಾಕಿರುವುದು ಬಿಜೆಪಿಯಲ್ಲಿ ಇದು ಹೊಸದಲ್ಲ. ಈ ಸಂಪ್ರದಾಯ ಮೊದಲಿನಿಂದಲು ಇದೆ. ಫಡ್ನವಿಸ್ ಅವರಿಗೆ ಚಿಕ್ಕ ವಯಸ್ಸಿಗೆ ಅಧಿಕಾರ ನೀಡಲಾಗಿತ್ತು. ಅದೇ ರೀತಿ ವಿಜಯೇಂದ್ರರಿಗೆ ಯುವಕರನ್ನ ಸೆಳೆಯುವ ಶಕ್ತಿ ಇದೆ. ಲೋಕಸಭಾ ಚುನಾವಣೆ ನಮ್ಮ ದೇವರು ಮೋದಿ ಹೆಸರಿನಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಆದ್ರೆ, ವಿಜಯೇಂದ್ರ ರಾಜ್ಯ ರಾಜಕಾರಣಕ್ಕೆ ಸಮರ್ಥ ನಾಯಕ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+