ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದ ಶಾಮನೂರು ಶಿವಶಂಕರಪ್ಪ: ಪತ್ರದಲ್ಲಿ ಏನಿದೆ?
ಬೆಂಗಳೂರು, ಫೆಬ್ರವರಿ 13: ಆಡಳಿತರೂಢ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆ ಹಾಗೂ ರಾಜ್ಯಸಭಾ ಚುನಾವಣೆಗೆ ಭರ್ಜರಿಯಾಗಿ ತಯಾರಿ ನಡೆಸಿದೆ.ಇತ್ತ ಟಿಕೆಟ್ ಗಾಗಿ ಹಲವು ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಬರೆದ ಪತ್ರದಲ್ಲಿ, ಸ್ವಾತಂತ್ರ್ಯ ಪೂರ್ವದಲ್ಲೂ, ನಂತರವೂ ಕಾಂಗ್ರೆಸ್ ಪಕ್ಷವನ್ನು ವೀರಶೈವ ಲಿಂಗಾಯತರು ಬೆಂಬಲಿಸಿರುವುದು ಅನೇಕ ಘಟನೆಗಳಿಂದ ಕಂಡು ಬರುತ್ತದೆ. ಸ್ವಾತಂತ್ರ್ಯಾ ನಂತರ ಚುನಾವಣೆಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗಿನ ಚುನಾವಣಾ ಅಂಕಿ-ಅಂಶಗಳನ್ನು ಪರಾಮರ್ಶಿಸುವುದಾದರೆ ವೀರಶೈವ-ಲಿಂಗಾಯತರು 199ರವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು.

ಇದಕ್ಕೆ ಹಲವಾರು ಕಾರಣಗಳಿವೆ. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವೀರೇಂದ್ರ ಪಾಟೀಲ್ ಮುಂತಾದ ನಮ್ಮ ಸಮಾಜದ ನಾಯಕರುಗಳು ಹಾಗೂ ಮುತ್ಸದ್ದಿಗಳು ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಸ್ಮರಿಸಿದ್ದಾರೆ.
ಆದರೆ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬಂದಿದ್ದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ.
ಈಗಲೂ ಕಾಲಮಿಂಚಿಲ್ಲ, ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತೀರೆಂದು ನಂಬಿರುತ್ತೇವೆ ಎಂದು ಉಲ್ಲೇಖಿಸಿದ್ದಾರೆ. ನಮ್ಮ ರಾಜ್ಯದವರೇ ಆದ ತಮಗೆ ಪ್ರತ್ಯೇಕವಾಗಿ ನಮ್ಮ ಸಮಾಜದ ಬಗ್ಗೆ ಹೇಳುವಂತದ್ದು ಏನೂ ಇಲ್ಲ.

ಕಳೆದ 7 ದಶಕಗಳಿಂದ ನೀವು ಹತ್ತಿರದಿಂದ ನಮ್ಮ ಸಮಾಜವನ್ನು ಬಲ್ಲವರಾಗಿದ್ದೀರಿ. ಇದನ್ನೆಲ್ಲವನ್ನು ಸರಿಪಡಿಸುವ ಶಕ್ತಿ ತಮ್ಮಲ್ಲಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡವುದರ ಮುಖಾಂತರ ಕಾಂಗ್ರೆಸ್ ಪಕ್ಷವು ತನ್ನ ಗತವೈಭವವನ್ನು ಗಳಿಸುವಂತಾಗಲಿ ಎಂದು ಆಶಿಸುತ್ತೇವೆ ಎಂದಿದ್ದಾರೆ.
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕೋರುತ್ತೇವೆ. ಅಲ್ಲದೇ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಸಮಾಜದವರಿಗೆ ಆದ್ಯತೆ ನೀಡಬೇಕು.
ಈ ಮೂಲಕ ಹಿಂದೆ ಆಗಿರುವಂತಹ ನ್ಯೂನತೆಗಳನ್ನು ಸರಿಪಡಿಸಿಕೊಂಡು ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ತಮ್ಮ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವು ಭವ್ಯ ಭಾರತ ನಿರ್ಮಾಣ ಮಾಡುವಂತಾಗಲು ಕಾಂಗ್ರೆಸ್ ಪಕ್ಷ ಮತ್ತು ಚುನಾವಣೆಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆಯ ಮೇರೆಗೆ ಸ್ಥಾನಮಾನ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಕೋರಿದ್ದಾರೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications