• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಿತ್ಯೋತ್ಸವ ಕವಿಯ ನಿಧನಕ್ಕೆ ಗಣ್ಯರ ಸಂತಾಪ

|

ಬೆಂಗಳೂರು, ಮೇ 5: ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಪ್ರೊ. ಕೆ ಎಸ್ ನಿಸಾರ್ ಅಹಮದ್ ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಕನ್ನಡ ಸಾರಸ್ವತ ಲೋಕದಲ್ಲಿ ಸಭ್ಯ ಕವಿಯೆಂದೇ ಹೆಸರಾಗಿರುವ ನಿಸಾರ್‌ ಅಹಮದ್‌, ಜೋಗದ ಸಿರಿ ಬೆಳಕಿನಲ್ಲಿ ಸಾಹಿತ್ಯವು ಅತ್ಯಂತ ಜನಪ್ರಿಯವಾಗಿದೆ. ಶಿವಮೊಗ್ಗದಲ್ಲಿ ನಡೆದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಿಸಾರ್ ಅಹಮದ್ ಅವರ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಹಿರಿಯ ಕವಿ ಕೆ. ನಿಸಾರ್ ಅಹಮದ್ ವಿಧಿವಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ನಿಸಾರ್ ಅಹಮದ್ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. 2007 ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಸಂತಾಪ

ಸಿದ್ದರಾಮಯ್ಯ ಸಂತಾಪ

ಕವಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಿ ಬಾರದ ನಷ್ಟ. ಯಾವ ಪಂಥ-ಪಂಗಡಕ್ಕೆ ಕಟ್ಟಿಕೊಳ್ಳದೆ ಸ್ಚಚ್ಛಂದವಾಗಿ ಹಕ್ಕಿಯಂತೆ ಕಾವ್ಯಕಟ್ಟುತ್ತಾ‌ ಸರ್ವಜನ ಪ್ರಿಯರಾಗಿದ್ದ ನಿಸಾರ್ ಅಹ್ಮದ್ ಅವರ ಕಾಯ ಅಳಿದರೂ ಅವರ ಕಾವ್ಯದ ಮೂಲಕ ನಮ್ಮ ನೆನಪಲ್ಲಿ ಸದಾ ಜೀವಂತ. ಅವರಿಗೆ ನನ್ನ ಗೌರವಪೂರ್ಣ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮೈಸೂರು ದಸರಾ ಉದ್ಘಾಟಿಸಿ ನಿಸಾರ್ ಅಹಮದ್ ಹೇಳಿದ್ದು ಹೀಗೆ..

ಎಚ್ ಡಿ ಕುಮಾರಸ್ವಾಮಿ ಸಂತಾಪ

ಎಚ್ ಡಿ ಕುಮಾರಸ್ವಾಮಿ ಸಂತಾಪ

"ಜೋಗದ ಸಿರಿ ಬೆಳಕಿನಲ್ಲಿ" ಎಂದು ನಿತ್ಯೋತ್ಸವನ್ನು ಸಾಹಿತ್ಯದ ಮೂಲಕ ಹರಸಿ ನಾಡಿನ ಮನಮನೆಗಳಲ್ಲಿ ನೆಲೆಸಿದ್ದ ನಿತ್ಯೋತ್ಸವ ಕವಿ ಡಾ.ನಿಸಾರ್ ಅಹಮದ್ ಅವರ ನಿಧನ ಕನ್ನಡ ಸಾರಸ್ವತ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.ನಿಸರ್ಗದ ರಮಣೀಯತೆಯನ್ನು ಸ್ವಚ್ಛ ಕನ್ನಡದಲ್ಲಿ ವರ್ಣಿಸುವ ಮೂಲಕ ಪ್ರಕೃತಿಯ ಸೌಂದರ್ಯವನ್ನು ಉಣಬಡಿಸಿದ್ದ ಸಾಹಿತ್ಯ ಶ್ರೇಷ್ಠರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೂ,ಸ್ನೇಹಿತರಿಗೂ,ಸಾಹಿತ್ಯಾಸಕ್ತರಿಗೂ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರ್.ವಿ.ದೇಶಪಾಂಡೆ ತಮ್ಮ ಸಂತಾಪ

ಆರ್.ವಿ.ದೇಶಪಾಂಡೆ ತಮ್ಮ ಸಂತಾಪ

ಕನ್ನಡ ನಾಡಿನ ಖ್ಯಾತ ಸಾಹಿತಿ ಹಾಗೂ ನಿತ್ಯೋತ್ಸವ ಕವಿ ಎಂದೇ ಪ್ರಸಿದ್ದರಾಗಿದ್ದ ಕೆ.ಎಸ್.ನಿಸಾರ್ ಅಹಮದ್ ನಿಧನದಿಂದ ಸಾಹಿತ್ಯ ಲೋಕದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ. ಪದ್ಮಶ್ರೀ, ರಾಜ್ಯೋತ್ಸವ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪಡೆದಿದ್ದ ಇವರು ಕನ್ನಡ ನಾಡು-ನುಡಿಗೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಇವರ ಅಗಲಿಕೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಭಗವಂತ ಶ್ರೀಯುತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಜೋಗದ ಸಿರಿ ಬೆಳಕಿನಲ್ಲಿ ಮರೆಯಾದ ನಿತ್ಯೋತ್ಸವ ಕವಿ

ಡಿಸಿಎಂ ಡಾ ಅಶ್ವತ್ಥ್ ನಾರಾಯಣ ಸಂತಾಪ

ಡಿಸಿಎಂ ಡಾ ಅಶ್ವತ್ಥ್ ನಾರಾಯಣ ಸಂತಾಪ

ನಿತ್ಯೋತ್ಸವದ ಕವಿ, ಕನ್ನಡ ಕಾವ್ಯ ಜಗತ್ತಿಗೆ ಹೊಸ ನವೋಲ್ಲಾಸ ತಂದುಕೊಟ್ಟ ಉತ್ಸಾಹದ ಚಿಲುಮೆ ಪ್ರೊ. ಕೆ ಎಸ್ ನಿಸಾರ್ ಅಹಮದ್ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಅವರು ತಮ್ಮ ಕಾವ್ಯದಿಂದ ಮಾತ್ರವಲ್ಲದೆ, ವಿಚಾರದಿಂದಲೂ ಎಲ್ಲರಿಗೂ ಚೈತನ್ಯ ತುಂಬಿದವರು. ಅವರ ನಿತ್ಯೋತ್ಸವ ಹಾಗೂ ಕುರಿಗಳು ಸಾರ್ ಕುರಿಗಳು , ಬೆಣ್ಣೆ ಕದ್ದ ನಮ್ಮ ಕೃಷ್ಣ ಪದ್ಯಗಳನ್ನು ಯಾರು ಮರೆಯಲು ಸಾಧ್ಯ? ಕನ್ನಡ ಸಾಹಿತ್ಯದಲ್ಲಿ ಆಧುನಿಕತೆ ಮತ್ತು ರಮ್ಯತೆಯನ್ನು ಮೇಳೈಸಿ ಬರೆದ ಮಹಾಕವಿ ಅವರು. ಅವರ ಕುಟುಂಬಕ್ಕೆ, ನಾಡಿನ ಸಾರಸ್ವತ ಲೋಕಕ್ಕೆ ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಸಿಗಲಿ. ಪ್ರೊ. ನಿಸಾರರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ ಸಂತಾಪ ಸೂಚಿಸಿದ್ದಾರೆ.

ಕೆ.ಎಸ್.ನಿಸಾರ್ ಅಹ್ಮದ್ ನಿಧನ: ಶೆಟ್ಟರ್ ಸಂತಾಪ

ಕೆ.ಎಸ್.ನಿಸಾರ್ ಅಹ್ಮದ್ ನಿಧನ: ಶೆಟ್ಟರ್ ಸಂತಾಪ

ಹುಬ್ಬಳ್ಳಿ : ಕನ್ನಡದ ಹಿರಿಯ ಸಾಹಿತಿ, ಭೂ ವಿಜ್ಞಾನದ ಪ್ರಾಧ್ಯಾಪಕ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅವರ ನಿಧನಕ್ಕೆ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಕಾವ್ಯದ ಮೂಲಕ ನಾಡಿಗೆ ಮಹತ್ವದ ಕೊಡುಗೆ ನೀಡಿರುವ ನಿಸಾರ್ ಅಹ್ಮದ್ ಅವರ ಅಗಲಿಕೆಯಿಂದ , ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ನಷ್ಟವಾಗಿದೆ.ಸರಳ, ಸಜ್ಜನಿಕೆ ವ್ಯಕ್ತಿತ್ವದ ನಿಸಾರ್ ಅಹ್ಮದ್ ಅವರ ಸಾರ್ಥಕ ಬದುಕು ನಾಡಿಗೆ ಆದರ್ಶಪ್ರಾಯವಾಗಿದೆ. ಅವರ ನಿತ್ಯೋತ್ಸವ ಗೀತೆ ಪ್ರತಿಯೊಬ್ಬ ಕನ್ನಡಿಗನ ಮನೆ ಮನದ ಹಾಡಾಗಿದೆ.ಅವರ ಉಳಿದ ಕೃತಿಗಳು ಕೂಡ ಕನ್ನಡದ ಹೆಮ್ಮೆಯ ರಚನೆಗಳಾಗಿವೆ, ಕುಟುಂಬದ ಸದಸ್ಯರು, ಓದುಗರು,ಒಡನಾಡಿಗಳು ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಬರಲಿ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ

ಬೆಂಗಳೂರು: ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿರುವ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಿಸಾರ್ ಅಹಮದ್ ಅವರು ಕನ್ನಡ ಸಾರಸ್ವತ ಲೋಕದ ದಿಗ್ಗಜ. ನಮ್ಮ ನಾಡನ್ನು ನಿತ್ಯೋತ್ಸವ ಗೀತೆ ಮೂಲಕ ಅದ್ಭುತವಾಗಿ ವರ್ಣಿಸಿ ನಿತ್ಯೋತ್ಸವ ಕವಿ ಎಂದು ಖ್ಯಾತಿ ಪಡೆದವರು. ಅವರ ಅಗಲಿಕೆ ಸುದ್ದಿ ಬೇಸರ ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ.

English summary
Senior Poet And Writer K S Nisar Ahmed Died: Many VIP Persons Mourn. K S Nisar Ahmed today Died at his bengaluru residence
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more