ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ: ಮಾಜಿ ಸಿಎಂ ಬಿಎಸ್ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು, ನವೆಂಬರ್ 07: ಮಾಜಿ ಸಚಿವರಾದ ಡಿ.ಬಿ.ಚಂದ್ರೇಗೌಡ ಅವರು ಕಳೆದ ರಾತ್ರಿ 12:20ಕ್ಕೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಸಾವಿಗೆ ರಾಜ್ಯದ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.
— Basavaraj S Bommai (@BSBommai) November 7, 2023
ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು… pic.twitter.com/vkW0lPkVFj
ಮಾಜಿ ಸಚಿವರಾದ ಡಿ.ಬಿ.ಚಂದ್ರೇಗೌಡ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬದವರಲ್ಲಿ, ಅಭಿಮಾನಿಗಳಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಕರ್ನಾಟಕದ ಶ್ರೇಷ್ಠ ಸಂಸದೀಯಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಶ್ರೀ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.
ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ…
— B.S.Yediyurappa (@BSYBJP) November 7, 2023
ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು ಅಗಲಿರುವುದು ಮನೆಯ ಹಿರಿಯರೊಬ್ಬರನ್ನು ಕಳೆದುಕೊಂಡಂತೆ ಆಗುತ್ತಿದೆ. ಚಂದ್ರೇಗೌಡರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಡಿ.ಬಿ.ಚಂದ್ರೇಗೌಡರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದು, ರಾಜಕೀಯ ಮುತ್ಸದ್ಧಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ಮುಖಂಡರಾದ ಅವರು, ಶಾಸಕರಾಗಿ, ಸಂಸದರಾಗಿ ಕಾರ್ಯ ನಿರ್ವಹಿಸಿದವರು. ರಾಜಕೀಯ ಕ್ಷೇತ್ರದಲ್ಲಿ ಮಾದರಿ ವ್ಯಕ್ತಿತ್ವ ಅವರದು ಎಂದು ತಿಳಿಸಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರು, ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನೂ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದು, ಆಪ್ತವಲಯದಲ್ಲಿ ಡಿಬಿಸಿ ಎಂದೇ ಪ್ರಸಿದ್ದರಾಗಿದ್ದ ಡಿ.ಬಿ. ಚಂದ್ರೇಗೌಡರನ್ನು ಕಳೆದು ಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಅವರ ನಿಧನದಿಂದ ಮಲೆನಾಡಿನ ಭಾಗದಿಂದ ಬಂದಂತಹ ಸಮಾಜವಾದದ ಗಟ್ಟಿಕೊಂಡಿ, ನಿರ್ಮಲ ಮನಸ್ಸಿನ ವ್ಯಕ್ತಿತ್ವವೊಂದು ಕಳಚಿಬಿದ್ದಂತಾಗಿದೆ. ಕಾಂಗ್ರೆಸ್ ಪಕ್ಷ ಹಾಗೂ ಇಂದಿರಾ ಗಾಂಧಿ ಅವರು ಸಂಕಷ್ಟದಲ್ಲಿದ್ದ ವೇಳೆ 1978 ರಲ್ಲಿ ಚಂದ್ರೆಗೌಡರು ತಮ್ಮ ಸಂಸತ್ ಸದಸ್ಯ ಸ್ಥಾನವನ್ನು ಬಿಟ್ಟುಕೊಟ್ಟು, ಇಂದಿರಾಗಾಂಧಿ ಅವರ ಗೆಲುವಿಗೆ ಹಗಲು- ರಾತ್ರಿ ದುಡಿದು ಇಡೀ ದೇಶದ ಗಮನ ಸೆಳೆದಿದ್ದರು ಎಂದು ಸಂತಾಪ ಸೂಚಿಸಿದ್ದಾರೆ.












Click it and Unblock the Notifications