ಹಿರಿಯ ಸಾಹಿತಿ ನಾ.ಡಿಸೋಜ ಅಸ್ವಸ್ಥ:ಆಸ್ಪತ್ರೆಗೆ ದಾಖಲು
ಬೆಂಗಳೂರು, ಆಗಸ್ಟ್ 22: ಹಿರಿಯ, ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ನಾ ಡಿಸೋಜ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಡಾ. ನಾಡಿಸೋಜಾ ಅವರು 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕಳೆದ ನಾಲ್ಕು ದಿನಗಳ ಹಿಂದೆ ಕಾಲು ನೋವು ಹಾಗೂ ಮಧುಮೇಹ ಉಲ್ಬಣದಿಂದಾಗಿ ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ನಾಲ್ಕು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.ಸದ್ಯ ಆರೋಗ್ಯ ಸ್ಥಿತಿ ಚೇತರಿಕೆಯಾಗುತ್ತಿದ್ದು ಇನ್ನೆರಡು ದಿನಗಳಲ್ಲಿ ಸಾಗರಕ್ಕೆ ಮರಳಲಿದ್ದಾರೆ.
ನಾ.ಡಿಸೋಜ ಕುರಿತು ಸಣ್ಣ ಪರಿಚಯ:ನಾ. ಡಿಸೋಜ ರವರು ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಲ್ಲದೇ ದೇಶದಲ್ಲಿಯೇ ಸಾಹಿತ್ಯದ ಮೂಲಕವೇ ಮನೆಮಾತಾಗಿದ್ದಾರೆ.

ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದಲ್ಲಿ 12 ಕೃತಿಗಳನ್ನು ಪ್ರಕಟಿಸಿದ್ದಾರೆ. ನಾಡಿಗೆ ಬೆಳಕನ್ನು ನೀಡಲು ಪ್ರಾರಂಭಿಸಿದ ವಿದ್ಯುಚ್ಛಕ್ತಿ ಯೋಜನೆಯ ಅಡಿಯಲ್ಲಿ ಬಹಳಷ್ಟು ಜನರ ಬದುಕುಗಳು ಕತ್ತಲೆಯಲ್ಲಿ ಕರಗಿ ಹೋಗುವ ವಸ್ತುವನ್ನಾಗಿ ಉಳ್ಳ 'ಮುಳುಗಡೆ' ಕಾದಂಬರಿಯು ಸುಧಾ ಯುಗಾದಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ.
ಸುರೇಶ್ ಹೆಬ್ಲೀಕರ್ ರವರ ನಿರ್ದೇಶನದಲ್ಲಿ 'ಕಾಡಿನ ಬೆಂಕಿ', ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ 'ದ್ವೀಪ (ಚಲನಚಿತ್ರ)', ಸಿರಿಗಂಧ ಶ್ರೀನಿವಾಸಮೂರ್ತಿಯವರ ನಿರ್ದೇಶನದಲ್ಲಿ 'ಬಳುವಳಿ', ಕೋಡ್ಲು ರಾಮಕೃಷ್ಣರವರ ನಿರ್ದೇಶನದಲ್ಲಿ 'ಬೆಟ್ಟದಪುರದ ದಿಟ್ಟ ಮಕ್ಕಳು' ಮತ್ತು ಮನುರವರ ನಿರ್ದೇಶನದಲ್ಲಿ 'ಆಂತರ್ಯ' ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ. ಇವುಗಳಲ್ಲಿ 'ಕಾಡಿನ ಬೆಂಕಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , 'ದ್ವೀಪ' ಚಿತ್ರ 'ಸ್ವರ್ಣ ಕಮಲ' ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ.












Click it and Unblock the Notifications