ಪ್ರತ್ಯೇಕ ಲಿಂಗಾಯತ ಧರ್ಮ: ಸರ್ಕಾರಕ್ಕೆ ಉತ್ತರಿಸಲು 8 ದಿನ ಕಾಲಾವಕಾಶ

ಬೆಂಗಳೂರು, ಮಾರ್ಚ್ 3: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಮತ್ತೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ನಿವೃತ್ತ ನ್ಯಾ. ನಾಗಮೋಹನದಾಸ್‌ ನೇತೃತ್ವದ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇನ್ನೊಂದೆಡೆ ಈ ಸಮಿತಿ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವತಿಯಿಂದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ವರದಿ ನೀಡಲು ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಈ ಸಮಿತಿಯ ರಚನೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿವೆ. ಇವುಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮಾರ್ಚ್9ರ ಒಳಗೆ ಪ್ರತಿಕ್ರಿಯೆ ನೀಡುವಂತೆ ಸರಕಾರಕ್ಕೆ ಸೂಚಿಸಿದೆ.

Separate Lingayat religion: State told to file objections in 8 days

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾ. ಎಸ್. ಸುನೀಲ್ ದತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 9ಕ್ಕೆ ಮುಂದೂಡಿದೆ. ಸಮಿತಿಯ ರಚನೆಯು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿರುತ್ತದೆ ಎಂದು ಈಗಾಗಲೇ ಮಧ್ಯಂತರ ಆದೇಶವನ್ನೂ ನೀಡಲಾಗಿದೆ.

ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಅರ್ಜಿದಾರರು, ಸಮಿತಿ ನೀಡುವ ಶಿಫಾರಸ್ಸುಗಳನ್ನು ಸರಕಾರ ಪಾಲಿಸುವುದರಿಂದ ಸಮಾಜದಲ್ಲಿ ಒತ್ತಡ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಜತೆಗೆ ಕೆಲವು ಕ್ಯಾಬಿನೆಟ್ ಸಚಿವರು ಪ್ರತ್ಯೇಕ ಲಿಂಗಾಯತ ಧರ್ಮದ ಪರ ಸಮಾವೇಶಗಳನ್ನು ನಡೆಸುತ್ತಿದ್ದಾರೆ ಎಂದೂ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಜತೆಗೆ ಶಶಿಧರ್ ಶಾನುಭಾಗ್ ಮೊದಲಾದವರು ತಮ್ಮ ಅರ್ಜಿಯಲ್ಲಿ, ಸರಕಾರಕ್ಕೆ ಸಮಿತಿ ನೇಮಕ ಮಾಡುವ ಅರ್ಹತೆ ಇಲ್ಲ. ಆಯೋಗವನ್ನು ಅಲಸಂಖ್ಯಾತರ ಕಲ್ಯಾಣಕ್ಕಾಗಿ ರಚನೆ ಮಾಡಲಾಗಿದೆಯೇ ಹೊರತು, ಇದಕ್ಕೆ ಸಮಿತಿ ನೇಮಿಸುವ ಅಧಿಕಾರವಿಲ್ಲ ಎಂದು ಹೇಳಿದ್ದರು.

ಈ ಕುರಿತು ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ, ಸರಕಾರದ ಉತ್ತರ ಸಿದ್ದವಿದೆ. ಇದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+