Get Updates
Get notified of breaking news, exclusive insights, and must-see stories!

ಅನಿವಾಸಿ ಕನ್ನಡಿಗರಿಗೆ ಶೀಘ್ರವೇ ಸಿಗಲಿದೆ ಸಿಹಿಸುದ್ದಿ

ಬೆಂಗಳೂರು, ಜುಲೈ 14: "ಅನಿವಾಸಿ ಕನ್ನಡಿಗರ ಅವಶ್ಯಕತೆ, ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ, ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ" ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹೇಳಿದರು.

ಡಾ. ಆರತಿ ಕೃಷ್ಣ ಶಿವಮೊಗ್ಗ ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮತ್ತು ಇತರ ಅಧಿಕಾರಿಗಳು, ಅನಿವಾಸಿ ಕನ್ನಡಿಗರು ಉಪಸ್ಥಿತರಿದ್ದರು.

Separate Ministry For Solve Issues Of NRI Kannadigas

"ತುರ್ತು ಸಮಯಗಳಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಯೊಡನೆ ಚರ್ಚಿಸಿ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅಂದಾಜಿನ ಪ್ರಕಾರ ರಾಜ್ಯದಲ್ಲಿ 14 ಲಕ್ಷ ಅನಿವಾಸಿ ಕನ್ನಡಿಗರಿದ್ದು ಪ್ರತ್ಯೇಕ ಸಚಿವಾಲಯ ಇದ್ದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಇನ್ನೂ ಪರಿಣಾಮಕಾರಿಯಾಗಿ ಸ್ಪಂದಿಸಬಹುದು" ಎಂದರು.

ಸಭೆಯಲ್ಲಿ ಮಾತನಾಡಿದ ಡಾ. ಆರತಿ ಕೃಷ್ಣ, "ಅನಿವಾಸಿ ಭಾರತೀಯ ಸಮಿತಿಯನ್ನು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2008ರಲ್ಲಿ ಸ್ಥಾಪಿಸಲಾಗಿದೆ. ವಿಶ್ವದೆಲ್ಲೆಡೆ ನೆಲೆಸಿರುವ ಅನಿವಾಸಿ ಕನ್ನಡಿಗರ ಆಕಾಂಕ್ಷೆ, ಅವಶ್ಯಕತೆ ಮತ್ತು ನಿರೀಕ್ಷೆಗಳನ್ನು ಗಮನದಲ್ಲಿ ಇಟ್ಟುಕೊಂಡು 2016-17ನೇ ಸಾಲಿನಲ್ಲಿ ಅನಿವಾಸಿ ಭಾರತೀಯ ನೀತಿಯನ್ನು ಹೊರತರಲಾಗಿದೆ" ಎಂದು ತಿಳಿಸಿದರು.

"ಅನಿವಾಸಿ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ದುಡಿಯುವ ವರ್ಗ ಹೆಚ್ಚಿನ ತೊಂದರೆ ಎದುರಿಸುತ್ತಾರೆ. ಗಲ್ಫ್ ದೇಶಗಳಿಗೆ ತೆರಳಿದ ಅನಿವಾಸಿ ಕನ್ನಡಿಗರಿಂದ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಹೊತ್ತ ಕರೆಗಳು ಬರುತ್ತಿರುತ್ತವೆ" ಎಂದು ಹೇಳಿದರು.

ಅನಿವಾಸಿ ಕನ್ನಡಿಗರ ಸಮಸ್ಯೆ: "ನಕಲಿ ಏಜೆನ್ಸಿ ಮೂಲಕ ತೆರಳಿದ ದುಡಿಯುವ ವರ್ಗ ಅಲ್ಲಿ ತೊಂದರೆಗಳೊಳಗಾಗಿ, ಯಾವುದೋ ಕೆಲಸ ಮಾಡುವುದು ಅನಿವಾರ್ಯವಾಗಿ, ಅವರ ವೀಸಾ ಮತ್ತು ಪಾಸ್‍ಪೋರ್ಟ್‍ಗಳನ್ನೂ ಉದ್ಯೋಗದಾತರು ಕಿತ್ತುಕೊಂಡು ಪರಿತಪಿಸುತ್ತಾರೆ. ಶಿವಮೊಗ್ಗ, ಹೆಚ್‍ಡಿ ಕೋಟೆ ಮತ್ತು ಹುಣಸೂರಿನ ಹಕ್ಕಿಪಿಕ್ಕಿ ಜನಾಂಗದವರು ವಿಶ್ವದೆಲ್ಲೆಡೆ ಸಂಚರಿಸುತ್ತಾರೆ. ಅವರು ಕೆಲಸಕ್ಕೆ ತೆರಳಿದ ದೇಶದಲ್ಲಿ ಹಲವು ಕಷ್ಟಗಳನ್ನು ಅನುಭವಿಸುತ್ತಾರೆ. ಇತ್ತೀಚೆಗೆ 40 ಕ್ಕೂ ಹೆಚ್ಚು ಜನರು ಸೂಡಾನ್‍ನಲ್ಲಿ ಸಿಲುಕಿದ್ದರು" ಎಂದು ಡಾ. ಆರತಿ ಕೃಷ್ಣ ತಿಳಿಸಿದರು.

"ಭದ್ರಾವತಿ, ತೀರ್ಥಹಳ್ಳಿಯಿಂದಲೂ ಹೆಚ್ಚಿನ ಜನರು ದುಡಿಯುವ ಉದ್ದೇಶಗಳಿಗೆ ಕಾಂಬೋಡಿಯಾ, ವಿಯೆಟ್ನಾಂ ಇತರೆ ಬೇರೆ ದೇಶಗಳಿಗೆ ತೆರಳಿ ಸವಾಲುಗಳನ್ನು ಎದುರಿಸುತ್ತಾರೆ. ವಿದೇಶದಲ್ಲಿ ಮರಣ ಹೊಂದಿದವರ ಶವವನ್ನು ಇಲ್ಲಿಗೆ ತರಲು ಕರೆ ಮಾಡುತ್ತಾರೆ. ಕೋವಿಡ್, ಇತರೆ ಸಂಕಷ್ಟದ ಸಮಯದಲ್ಲಿ ಅನಿವಾಸಿ ಕನ್ನಡಿಗರಿಗೆ ಸಹಾಯ ಮಾಡಲಾಗಿದೆ" ಎಂದು ವಿವರಣೆ ನೀಡಿದರು.

"ವಿದೇಶದಿಂದ ಹಿಂದಿರುಗಿದವರಿಗೆ ಇಲ್ಲಿ ಬಂದ ಮೇಲೆ ಅನೇಕ ರೀತಿಯ ಸಮಸ್ಯೆ ಕೂಡ ಎದುರಾಗಿದೆ. ವಿದೇಶಕ್ಕೆ ತೆರಳುವವರು ಸಮಿತಿಯ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡರೆ, ಅವರಿಗೆ ಸಹಾಯ ಮಾಡುವುದು ಸುಲಭವಾಗುತ್ತದೆ. ಆದ್ದರಿಂದ ಹೊರ ದೇಶಗಳಿಗೆ ತೆರಳುವ ಮುನ್ನ ನೋಂದಣಿ ಮಾಡಿಸಿಕೊಳ್ಳಬೇಕು. ಅನಿವಾಸಿಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿಗೆ ಬರಲು ಕಷ್ಟವಾದಲ್ಲಿ ತಾಲ್ಲೂಕುಗಳಲ್ಲಿ ತಹಶೀಲ್ದಾರ್, ಎಸಿ ಕಚೇರಿ, ಜಿಲ್ಲಾಡಳಿತಕ್ಕೆ ಸಹ ದೂರು ನೀಡಬಹುದು" ಎಂದರು.

ಸಭೆಯಲ್ಲಿ ಹಕ್ಕಿಪಿಕ್ಕಿ ಸಮುದಾಯದವರು, ರಾಜ್ಯದಲ್ಲಿ ತಾವು ವಿವಿಧೆಡೆ ಓಡಾಡಲು ಅಡ್ಡಿಯಾಗುತ್ತಿದೆ. ಆದ್ದರಿಂದ ಐಡಿ ಕಾರ್ಡ್ ನೀಡುವಂತೆ, ತಾವು ವಾಸಿಸುತ್ತಿರುವ ಮನೆಗಳು ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ನೀಡುವಂತೆ ಹಾಗೂ ಆದಿವಾಸಿ ತೈಲ ಕಂಪೆನಿ ತೆರೆಯಲು ಸ್ಥಳ ಮತ್ತು ಲೈಸೆನ್ಸ್ ನೀಡುವಂತೆ ಉಪಾಧ್ಯಕ್ಷರಿಗೆ ಮನವಿ ಮಾಡಿದರು.

"ಹೊರದೇಶದಲ್ಲಿರುವ ಅನಿವಾಸಿ ಕನ್ನಡಿಗರು ತಮ್ಮ ಊರಿಗೆ ಭೇಟಿ ನೀಡಿದಾಗ ವಿಶೇಷ ಸೌಲಭ್ಯಗಳನ್ನು ಪಡೆಯಲು ಅನಿವಾಸಿ ಕನ್ನಡಿಗರ ಕಾರ್ಡ್ ನೀಡಲಾಗುತ್ತಿದೆ. ಇಲ್ಲೇ ಇರುವವರಿಗೆ ಈ ಐಡಿ ಕಾರ್ಡ್ ನೀಡಲು ಬರುವುದಿಲ್ಲ. ಸಂಬಂಧಿಸಿದ ಇಲಾಖೆಗಳಿಗೆ ತಮ್ಮ ಮನವಿಯನ್ನು ಕಳುಹಿಸಲಾಗುವುದು, ಇತರೆ ಏನೇ ತೊಂದರೆಗಳಿದ್ದರೂ ಮನವಿ ನೀಡುವಂತೆ" ಡಾ. ಆರತಿ ಕೃಷ್ಣ ತಿಳಿಸಿದರು.

ವಿದೇಶಕ್ಕೆ ತೆರಳುವ ಭಾರತೀಯರು ಏಜೆನ್ಸಿ ಅಧಿಕೃತವೋ?, ಅಲ್ಲವೋ? ಎಂದು ವಿದೇಶಾಂಗ ಸಚಿವಾಲಯದ ಜಾಲತಾಣದಲ್ಲಿ ಪರಿಶೀಲಿಸಬೇಕು. ಹೊರ ದೇಶಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು ಅಥವಾ ನೌಕರಿ ಮಾಡಲು ತೆರಳುವವರು ಮುನ್ನ ಕುಟುಂಬದವರಿಗೆ ಏಜೆನ್ಸಿ, ಕಂಪನಿ, ಶಿಕ್ಷಣ ಸಂಸ್ಥೆ, ವಾಸವಿರುವ ಸ್ಥಳದ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಮತ್ತು ಅನಿವಾಸಿ ಭಾರತೀಯ ಸಮಿತಿ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಕರೆ ನೀಡಲಾಗಿದೆ.

ಸಾಮಾನ್ಯವಾಗಿ ಹೊಟ್ಟೆಪಾಡಿಗಾಗಿ ವಿದೇಶಕ್ಕೆ ತೆರಳುವವರಿಗೆ ಸಮಸ್ಯೆಗಳು ಹೆಚ್ಚಾಗಿ ಎದುರಾಗುತ್ತವೆ. ಉದ್ಯೋಗದಾತರು ಅವರ ವೀಸಾ, ಪಾಸ್‍ಪೋರ್ಟ್ ಕೊಡದೇ ದೌರ್ಜನ್ಯವೆಸಗುವುದು, ವಸ್ತುಗಳ ನಷ್ಟ, ಇತರೆ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅವರ ಡಾಟಾಬೇಸ್ ಇದ್ದರೆ ಸಮಿತಿ ವತಿಯಿಂದ ಸಹಾಯ ಮಾಡಬಹುದು. ಆದ್ದರಿಂದ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ಕೆಲಸಗಾರರು ಸಮಿತಿ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಜಿಲ್ಲಾಡಳಿತದ ಸಹಕಾರದಿಂದ ಜಾಗೃತಿ ಕಾರ್ಯಕ್ರಮ ಮಾಡಲು ತಾವು ಸಹಕಾರ ನೀಡುತ್ತೇನೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+