ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಿಎಂ, ಪರಮೇಶ್ವರ ಪ್ರತ್ಯೇಕ ರಾಜ್ಯ ಪ್ರವಾಸ ಅನಗತ್ಯ'

|
Google Oneindia Kannada News

ಬೆಂಗಳೂರು, ಡಿಸೆಂಬರ್. 14 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರತ್ಯೇಕವಾಗಿ ರಾಜ್ಯ ಪ್ರವಾಸ ಮಾಡಿ ಪ್ರಚಾರ ಮಾಡುವುದು ಅನಗತ್ಯ' ಎಂದು ಜಾಫರ್ ಷರೀಫ್ ಹೇಳಿದರು.

ಜಾಫರ್ ಷರೀಫ್ ರಾಹುಲ್ ಗಾಂಧಿ ಭೇಟಿ ಮಾಡಿದ್ದೇಕೆ?ಜಾಫರ್ ಷರೀಫ್ ರಾಹುಲ್ ಗಾಂಧಿ ಭೇಟಿ ಮಾಡಿದ್ದೇಕೆ?

ಬೆಂಗಳೂರಿನಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್, 'ಇಬ್ಬರು ನಾಯಕರು ಪ್ರತಿಷ್ಠೆ ಬದಿಗಿಟ್ಟು ಒಟ್ಟಿಗೆ ರಾಜ್ಯ ಪ್ರವಾಸ ಮಾಡಬೇಕಿತ್ತು. ಪ್ರತ್ಯೇಕವಾಗಿ ಪ್ರವಾಸ ಮಾಡುವುದು ಸರಿಯಲ್ಲ' ಎಂದರು.

Separate poll tours unnecessary says CK Jaffer Sharief

ಬಸವಕಲ್ಯಾಣದಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.13ರಿಂದ ಪ್ರವಾಸ ಆರಂಭಿಸಿದ್ದಾರೆ. ಕಾಂಗ್ರೆಸ್ ಶಾಸಕರ ಗೆದ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ.

'ಸಿಎಂ ಏನು ದೊಡ್ಡ ಬೆಟ್ಟನಾ?, ಅವನಿನ್ನೂ ಹುಡುಗ''ಸಿಎಂ ಏನು ದೊಡ್ಡ ಬೆಟ್ಟನಾ?, ಅವನಿನ್ನೂ ಹುಡುಗ'

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಡಿ.27ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತ ಕ್ಷೇತ್ರಗಳಲ್ಲಿ ಪರಮೇಶ್ವರ ಮತ್ತು ವಿವಿಧ ನಾಯಕರು ಪ್ರವಾಸ ನಡೆಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಡಿ.27ರಿಂದ ಡಾ.ಜಿ.ಪರಮೇಶ್ವರ ರಾಜ್ಯ ಪ್ರವಾಸಡಿ.27ರಿಂದ ಡಾ.ಜಿ.ಪರಮೇಶ್ವರ ರಾಜ್ಯ ಪ್ರವಾಸ

ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರ ಪ್ರವಾಸದ ಬಗ್ಗೆ ಭಾರೀ ಗೊಂದಲ ಉಂಟಾಗಿತ್ತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ವಾರ ಬೆಂಗಳೂರಿಗೆ ಬಂದಾಗ ಈ ಗೊಂದಲ ನಿವಾರಿಸಿದ್ದರು.

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಅಧಿಕಾರವಹಿಸಿಕೊಂಡ ಬಳಿಕ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಆಗ ಬೆಂಗಳೂರು ಅಥವ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ಕೆಪಿಸಿಸಿ ಚಿಂತನೆ ನಡೆಸುತ್ತಿದೆ.

English summary
Chief Minister Siddaramaiah and KPCC president G.Parameshwara taking out election tours separately in Karnataka unnecessary said, Senior Congress leader C.K.Jaffer Sharief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X