ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?

Recommended Video

      ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು? | Oneindia Kannada

      ಬೆಂಗಳೂರು, ಡಿಸೆಂಬರ್ 10 : 'ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ' ಎಂದು ಕೇಂದ್ರ ಸರ್ಕಾರ ಹೇಳಿದೆ. ಇದರಿಂದಾಗಿ ಪ್ರತ್ಯೇಕ ಧರ್ಮದ ಕುರಿತು ಪುನಃ ಚರ್ಚೆಗಳು ಆರಂಭವಾಗಿವೆ.

      ಕೇಂದ್ರ ಗೃಹ ಇಲಾಖೆ 2018ರ ನವೆಂಬರ್ 13ರಂದು ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ. ಈ ಕುರಿತ ಪತ್ರವನ್ನು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದೆ. ಪ್ರತ್ಯೇಕ ಧರ್ಮದ ರಚನೆ ಕುರಿತು ವರದಿ ನೀಡಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದ್ದು, ಇದರ ವಿರುದ್ಧ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

      ಸೋಮವಾರ ಅರ್ಜಿಯ ವಿಚಾರಣೆ ವೇಳೆ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಕೇಂದ್ರ ಸರ್ಕಾರದ ಜ್ಞಾಪನಾ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಏನು? ಎಂದು ಕಾದು ನೋಡಬೇಕಿದೆ.

      ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಹಲವು ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಯಾರು, ಏನು ಹೇಳಿದರೂ ಚಿತ್ರಗಳಲ್ಲಿ ನೋಡಿ....

      ಮಾತೆ ಮಹಾದೇವಿ

      ಮಾತೆ ಮಹಾದೇವಿ

      'ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನದ ಶಿಫಾರಸನ್ನು ತಿರಸ್ಕಾರ ಮಾಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ. ಸಿಖ್, ಜೈನ ಮಾತ್ರವಲ್ಲದೇ ಇಸ್ಲಾಂ, ಕ್ರೈಸ್ತ ಧರ್ಮಗಳಿಗೆ ಪ್ರತ್ಯೇಕ ಸ್ಥಾನಮಾನ ನೀಡಿ ಧಾರ್ಮಿಕ ಅಲ್ಪಸಂಖ್ಯಾತ ಎಂದು ಗುರುತಿಸಿರುವ ಕೇಂದ್ರ ಲಿಂಗಾಯತ ಮನವಿ ತಿರಸ್ಕರಿಸಿದ್ದ ಸರಿಯಲ್ಲ' ಎಂದು ಲಿಂಗಾಯತ ಧರ್ಮ ಮಹಾಸಭೆ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.

      ಪ್ರತ್ಯೇಕ ಧರ್ಮ ಆಗಿದ್ದರೆ ಅನುಕೂಲ ಆಗುತ್ತಿತ್ತು

      ಪ್ರತ್ಯೇಕ ಧರ್ಮ ಆಗಿದ್ದರೆ ಅನುಕೂಲ ಆಗುತ್ತಿತ್ತು

      'ನಾನು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಅಥವ ವಿರುದ್ಧವಾಗಿ ಇಲ್ಲ. ಪ್ರತ್ಯೇಕ ಧರ್ಮ ಆಗಿದ್ದರೆ ಅನುಕೂಲ ಆಗುತ್ತಿತ್ತೇನೋ?, ಆದರೆ, ಲಿಂಗಾಯತ ಹಾಗೂ ವೀರಶೈವ ಎರಡು ಒಂದೇ. ಕೇಂದ್ರ ಸರ್ಕಾರದ ನಿರ್ಧಾರ ನನಗೆ ಸರಿಯಾಗಿ ತಿಳಿದಿಲ್ಲ' ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

      ರಾಜಕೀಯ ಲಾಭಕ್ಕಾಗಿ ಮಾಡಿದ್ದರು

      ರಾಜಕೀಯ ಲಾಭಕ್ಕಾಗಿ ಮಾಡಿದ್ದರು

      'ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ ಮಾಡಬಾರದಿತ್ತು ಎಂದು ಹೇಳಿದ್ದಾರೆ. ಇದನ್ನು ಕೇವಲ ರಾಜಕೀಯ ಗಿಮಿಕ್ ಮಾಡಲಾಗಿದೆ. ರಾಜಕೀಯ ಲಾಭಕ್ಕಾಗಿ ಹಿಂದಿನ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ಮಾಡಲು ಮುಂದಾಗಿತ್ತು. ಚುನಾವಣೆಯಲ್ಲಿ ಮುಖಭಂಗವಾದ ಮೇಲೆ ಅವರಿಗೆ ಅದು ಅರ್ಥವಾಗಿದೆ. ಪ್ರತ್ಯೇಕ ಧರ್ಮಕ್ಕೆ ಅನುಮತಿ ನೀಡಲು ಅಸಾಧ್ಯವೆಂದು ಕೇಂದ್ರ ಸರ್ಕಾರ ಪ್ರಸ್ತಾವನೆಯನ್ನು ತಿರಸ್ಕರಿಸಿದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

      ಧರ್ಮವನ್ನು ಒಡೆಯಬಾರದು

      ಧರ್ಮವನ್ನು ಒಡೆಯಬಾರದು

      'ಪ್ರತ್ಯೇಕ ಲಿಂಗಾಯತ ಧರ್ಮದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಸಂತೋಷದ ವಿಚಾರ. ಯಾರೂ ಧರ್ಮವನ್ನು ಒಡೆಯಬಾರದು. ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿದರು. ಇದು ಶ್ರೀ ಬಸವೇಶ್ವರರಿಗೆ ಮಾಡಿದ ಅವಮಾನ. ಪ್ರತ್ಯೇಕ ಧರ್ಮದ ಮಾತನ್ನು ಮುಂದೆ ಬಿಡಬೇಕು' ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+