Government Employee: ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ

ಬೆಂಗಳೂರು, ಮಾರ್ಚ್‌ 04: ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ, ಇತರೆ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರವನ್ನು ಬರೆದಿತ್ತು. ಈಗ ಈ ವಿಚಾರದಲ್ಲಿ ಸರ್ಕಾರ ಮಾಹಿತಿಯನ್ನು ಕೇಳಿದ್ದು, ಅತಿ ತುರ್ತಾಗಿ ಮಾಹಿತಿ ಒದಗಿಸಬೇಕು ಎಂದು ಸೂಚನೆ ನೀಡಿದೆ.

ಈ ಕುರಿತು ವಿಮಲಾಕ್ಷಿ ಬಿ. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಆದೇಶವನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದ್ದು, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪತ್ರವನ್ನು ಉಲ್ಲೇಖಿಸಲಾಗಿದೆ.

Separate Rest Rooms For Women Employees In Government Offices Seeks Report

ಪತ್ರದ ವಿವರಗಳು: ಪತ್ರದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ.

ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು ದಿನಾಂಕ 10.03.2025ರೊಳಗೆ ಅತೀ ತುರ್ತಾಗಿ ಒದಗಿಸುವಂತೆ ಕೋರಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಿ ಕಛೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಒದಗಿಸುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿತ್ತು. ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಕುರಿತು ಪತ್ರವನ್ನು ಬರೆದಿದ್ದರು, ಪತ್ರದಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದರು.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಸರ್ಕಾರಿ ಕಛೇರಿಗಳಿಗೆ ನೀಡಿದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದ್ದು, ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡುಬಂದಿರುತ್ತದೆ ಮತ್ತು ಈ ಸಂಬಂಧ ಹಲವು ಮಹಿಳಾ ನೌಕರರ ಸಂಘಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ ಎಂದು ಹೇಳಿದ್ದರು.

ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗಾಗಿ ವಿಕಾಸಸೌಧದಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇದ್ದು, ಬೆಂಗಳೂರಿನ ಇತರೆ ಇಲಾಖೆಗಳ ಆಡಳಿತ ಕಛೇರಿಗಳಲ್ಲಿ ಈ ಸೌಲಭ್ಯ ಇರುವುದಿಲ್ಲ. ಮಹಿಳಾ ಸಿಬ್ಬಂದಿಗಳು ಹಲವು ದೈಹಿಕ ಮತ್ತು ಮಾನಸಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದರು.

* ಮಾಸಿಕ ಋತುಚಕ್ರದ ಸಮಯ.
* ಗರ್ಭಧರಿಸಿದ ಸಂದರ್ಭ.
* ಗರ್ಭಪಾತವಾದ ಸಂದರ್ಭ.
* ಹಸುಗೂಸುಗಳಿಗೆ ಹಾಲುಣಿಸುವ ತಾಯಂದಿರು.
* ಸಮವಸ್ತ್ರವನ್ನು ಬದಲಾಯಿಸಿಕೊಳ್ಳುವ ಸಂದರ್ಭ.
* ಇತರೆ ವೈದ್ಯಕೀಯ ಸಮಸ್ಯೆಗಳ ಸಮಯದಲ್ಲಿ ಮಹಿಳಾ ನೌಕರರು ಯಾವುದೇ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಯಾರಿಗೂ ಹೇಳಿಕೊಳ್ಳಲಾಗದೆ ಬಹಳಷ್ಟು ನೋವನ್ನು ಅನುಭವಿಸುವ ಸಂದರ್ಭಗಳನ್ನು ಕಂಡಿರುತ್ತೇವೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದರು.

ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳು ಸ್ವಲ್ಪ ಸಮಯ ವಿಶ್ರಾಂತಿಯನ್ನು ಪಡೆಯಲು, ಮಕ್ಕಳಿಗೆ ಹಾಲುಣಿಸಲು, ವಸ್ತ್ರ ಬದಲಾಯಿಸಲು ಉಪಯುಕ್ತವಾಗುವಂತೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ಅಥವಾ ಲಘು ವಿಶ್ರಾಂತಿ ತೆಗೆದುಕೊಳ್ಳಲು ಒಂದು ವಿಶ್ರಾಂತಿ ಕೊಠಡಿ ಅಗತ್ಯವಿದೆ.

ವಿಶ್ರಾಂತಿ ಕೊಠಡಿಯಲ್ಲಿ ಒಂದು/ ಎರಡು ಹಾಸಿಗೆ ಮತ್ತು ಮಂಚದ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಕುಳಿತುಕೊಳ್ಳಲು 4-5 ಚೇರುಗಳ ವ್ಯವಸ್ಥೆ, ವಿಶ್ರಾಂತಿ ಕೊಠಡಿಯಲ್ಲಿ ವಸ್ತ್ರ ಬದಲಾವಣೆಗೆ ಅವಶ್ಯವಿರುವ ಪಾರ್ಟಿಷನ್ ವ್ಯವಸ್ಥೆ ಒದಗಿಸಬೇಕು ಎಂದು ಮನವಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+