ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್; ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27 : ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡೆಸಿದ ಸಭೆ ವಿಫಲವಾಗಿದೆ. ರೈತರ ಮನವಿಗೆ ಸರ್ಕಾರ ಸ್ಪಂದಿಸದ ಕಾರಣ ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ ನಡೆಯಲಿದೆ.

ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸೆ.28ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಗಮಿಸಲು ತೊಂದರೆಯಾಗುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರೈತರ ಜೊತೆಗಿನ ಸಿಎಂ ಸಭೆ ವಿಫಲ; ಸೋಮವಾರ ಕರ್ನಾಟಕ ಬಂದ್ ರೈತರ ಜೊತೆಗಿನ ಸಿಎಂ ಸಭೆ ವಿಫಲ; ಸೋಮವಾರ ಕರ್ನಾಟಕ ಬಂದ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಕುರಿತು ಆದೇಶ ಹೊರಡಿಸಿದೆ. ಸೋಮವಾರ ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.

ರೈತರ ಜೊತೆ ಯಡಿಯೂರಪ್ಪ ಸಭೆ ವಿಫಲವಾಗಿದ್ದೇಕೆ? ರೈತರ ಜೊತೆ ಯಡಿಯೂರಪ್ಪ ಸಭೆ ವಿಫಲವಾಗಿದ್ದೇಕೆ?

sslc

ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಎಲ್ಲಾ ವಿಷಯಗಳ ಪರೀಕ್ಷೆಗಳು ಸೆಪ್ಟೆಂಬರ್ 29ರ ಮಂಗಳವಾರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಾಮರಾಜನಗರ: ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆಚಾಮರಾಜನಗರ: ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ : ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ.

ಸಭೆ ವಿಫಲ : ಕರ್ನಾಟಕ ಬಂದ್‌ಗೆ ಕರೆ ನೀಡಿರುವ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಡೆಸಿದ ಸಭೆ ವಿಫಲವಾಗಿದೆ. ಸಭೆಯಲ್ಲಿ ರೈತರು ಮಾಡಿದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಲಿಲ್ಲ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಯಾವುದೇ ಬದಲಾವಣೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಲಿಲ್ಲ.

ಶುಕ್ರವಾರ ವಿಧಾನಸೌಧದಲ್ಲಿ ನಡೆದ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್‌ ನಡೆಯಲಿದೆ. ಹಲವಾರು ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ನೀಡಿವೆ.

English summary
Karnataka education department postponed the SSLC all subjects supplementary exam on September 28, 2020. Farmers called Karnataka bandh on Monday to protest against farmer and labor against move by the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X