ಸರಣಿ ಹಂತಕ, ಕಾಮುಕ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆ ಭೀತಿ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 18: ಸರಣಿ ಹಂತಕ, ಅತ್ಯಾಚಾರಿ ಉಮೇಶ್ ರೆಡ್ಡಿ ತನ್ನ ಕೊರಳನ್ನು ರಕ್ಷಿಸಿಕೊಳ್ಳಲು ಕೊನೆ ಯತ್ನ ನಡೆಸಿದ್ದಾನೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾನೆ. ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಅತ್ತ ಸುಪ್ರೀಂಕೋರ್ಟ್ ಆದೇಶದಂತೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸಲು ಸಿದ್ಧತೆ ನಡೆದಿದೆ. ಒಟ್ಟು 18 ವರ್ಷ ಶಿಕ್ಷೆ ಅದರಲ್ಲಿ 10 ವರ್ಷ ಏಕಾಂತ ಸೆರೆಮನೆವಾಸ ಅನುಭವಿಸಿದ್ದೇನೆ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ರಾಷ್ಟ್ರಪತಿಗಳ ಕ್ಷಮಾದಾನ ವಿಳಂಬವಾದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟಿನಿಂದ ಗಲ್ಲು ಶಿಕ್ಷೆ ವಿಧಿಸಲಾಗಿದೆ.[ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆ ಖಾಯಂ]

Serial killer Umesh Reddy moves HC for commutation of death penalty

ಗಲ್ಲು ಶಿಕ್ಷೆಯಿಂದ ಕ್ಷಮಾದಾನ ನೀಡಲು ತಿರಸ್ಕರಿಸಿದ ರಾಜ್ಯ ಗೃಹ ಇಲಾಖೆ, ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಉಮೇಶ್ ರೆಡ್ಡಿ ಮನವಿ ಮಾಡಿದ್ದಾನೆ. ಅರ್ಜಿ ಇತ್ಯರ್ಥವಾಗುವವರೆಗೆ ಗಲ್ಲು ವಿಧಿಸುವುದನ್ನು ತಡೆಹಿಡಿಯಬೇಕು ಎಂದು ಉಮೇಶ್ ರೆಡ್ಡಿ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಕೇಳಿಕೊಂಡರು. ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಆರ್.ಬಿ.ಬೂದಿಹಾಳ್ ಅವರಿದ್ದ ಪೀಠದ ಅರ್ಜಿ ವಿಚಾರಣೆಯನ್ನು ಮಂಗಳವಾರ(ಅ.18) ನಡೆಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.[ಉಮೇಶ್ ರೆಡ್ಡಿ ಕ್ಷಮಾದಾನ ತಿರಸ್ಕರಿಸಿದ ಬಿಜೆಪಿ ಸಂಪುಟ]

ವಿಕೃತಕಾಮಿ ಹಾಗೂ ಸರಣಿ ಹಂತಕ ಉಮೇಶ ರೆಡ್ಡಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಅಕ್ಟೋಬರ್ 03) ಎತ್ತಿ ಹಿಡಿದಿದೆ. ಸುಮಾರು 12 ವರ್ಷಗಳ ಬಳಿಕ ಸುಪ್ರೀಂಕೋರ್ಟ್‌ನಿಂದ ಮಂಗಳವಾರ ಮಹತ್ವದ ಆದೇಶ 2011ರಲ್ಲಿ ಹೊರಬಿದ್ದಿತ್ತು.[ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ]

ಅತ್ಯಾಚಾರ, ಕೊಲೆ, ಚಿನ್ನಾಭರಣ ಕಳವು ಸೇರಿದಂತೆ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ಮಾಜಿ ಕಾನ್ಸ್ ಟೇಬಲ್ ಉಮೇಶ್‌ ರೆಡ್ಡಿ ವಿರುದ್ಧ 23 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.(ಒನ್ ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Serial rapist and murderer Umesh Reddy alias B.A. Umesh, on Monday moved the High Court of Karnataka seeking direction for commutation of death sentence to life imprisonment.
Please Wait while comments are loading...