ACP Chandan Kumar: ನಟ ದರ್ಶನ್ ಕೇಸ್‌ನಲ್ಲಿ ಹಿರೋ ಆಗಿದ್ದ ಎಸಿಪಿ ಚಂದನ್ ಕುಮಾರ್ ವಿರುದ್ಧ ಗಂಭೀರ ಆರೋಪ
ACP Chandan Kumar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸಿ ಎಸಿಪಿ ಚಂದನ್ ಕುಮಾರ್ ಅವರು ಹಿರೋ ಆಗಿದ್ದರು. ಅಲ್ಲದೆ, ದಕ್ಷ ಅಧಿಕಾರಿ ಅಂತಲೂ ಗುರುತಿಸಿಕೊಂಡಿದ್ದರು. ಈ ಪಕ್ರಣದ ತನಿಖೆಯನ್ನು ಗಂಭೀರವಾಗಿ ತೆಗೆದಕೊಂಡ ಕಾರಣ ಅವರು ರಾಜ್ಯದ ಸ್ಟಾರ್ ಆಗಿ ಮಿಂಚಿದ್ದರು. ಇದೀಗ ಅವರ ವಿರುದ್ಧವೇ ಗಂಭೀರ ಆರೋಪವೊಂದು ಕೇಳಿಬಂದಿದೆ.
ಪುನೀತ್ ಕೆರೆಹಳ್ಳಿ ಅವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅವಮಾನಿಯವಾಗಿ ನಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಎಸಿಪಿ ಚಂದನ್ ಕುಮಾರ್ ಮೇಲೆ ಆರೋಪ ಕೇಳಿಬಂದಿತ್ತು. ಇನ್ನೂ ಈ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕು ಆಯೋಗ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ.

"ಜುಲೈ 26ರಂದು ರಾತ್ರಿ 9ಗಂಟೆ ಸುಮಾರಿಗೆ ಕಾಟನ್ ಪೇಟ್ ಪೊಲೀಸರು ಕಾರಣ ತಿಳಿಸದೇ ಬಲವಂತವಾಗಿ ನನ್ನನ್ನು ಠಾಣೆಗೆ ಕರೆದುಕೊಂಡು ಹೋಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ, ಎಸಿಪಿ ಚಂದನ್ ಕುಮಾರ್ ಅವರು ನನಗೆ ಅವಾಚ್ಯ ಶಬ್ಧಗಳಿಂದ ನಿಂದಿದಿ ಲಾಠಿಯಿಂದ ಜೋರಾಗಿ ಹೊಡೆದು, ನಗ್ನಗೊಳಿಸಿ ಲೈಂಗಿಕ ಕಿರುಕುಳ ನೀಡಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ," ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು. ಅಲ್ಲದೆ, ನ್ಯಾಯ ಒದಗಿಸುವಂತೆ ಕೋರಿದ್ದರು.
ಇನ್ನು ಈ ಸಂಬಂಧ ತನಿಖೆ ನಡೆಸಿ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಉಪ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಮಾನವ ಹಕ್ಕು ಆಯೋಗಯು ಪುನೀತ್ ಕೆರೆಹಳ್ಳಿಯವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅವಮಾನಿಯವಾಗಿ ನೆಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದೆ.
"ಆದರೆ, ಒಬ್ಬ ಎಸಿಪಿ ವಿರುದ್ಧ ಮತ್ತೊಬ್ಬ ಎಸಿಪಿ ಹೇಗೆ ತನಿಖೆ ಮಾಡುತ್ತಾನೆ. ಇದರಲ್ಲಿ ತನಿಖೆ ಮಾಡುವ ಅಗತ್ಯ ಏನಿದೆ? ಕೇವಲ ಪ್ರಕರಣ ನೆಡೆದ ದಿನ ಪುನೀತ್ ಕೆರೆಹಳ್ಳಿ ಅವರನ್ನು ವಿಚಾರಣೆ ನಡೆಸಿದ ಕೊಠಡಿಯ ಸಿಸಿಟಿವಿ ದೃಶ್ಯ ಪರಿಶೀಲಿಸಿದರೆ ಸತ್ಯ ಏನೆಂದು ತಿಳಿಯುತ್ತದೆ. ಒಬ್ಬ ನೀಚ ಎಸಿಪಿಯನ್ನು ರಕ್ಷಿಸಲು ಕಾಂಗ್ರೆಸ್ಸ್ ಸರ್ಕಾರ ಮುಂದಾಗಿದೆ ಅಷ್ಟೇ. ಇದರಲ್ಲಿ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆ ನನಗಿಲ್ಲ. ಕಾನೊನು ಸಂವಿಧಾನ ಎಲ್ಲಾವೂ ಅಧಿಕಾರ ಮತ್ತು ಹಣ ಭಲ ಇರುವವರ ಪರ ಇರುತ್ತವೆ ಎನ್ನುವುದೇ ಸತ್ಯ," ಎಂದು ಪುನೀತ್ ಕೆರೆಹಳ್ಳಿ ಬರೆದುಕೊಂಡಿದ್ದಾನೆ.
ಘಟನೆ ಹಿನ್ನೆಲೆ: ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ರಾಜಸ್ಥಾನದಿಂದ ಬಂದಿದ್ದ ಲೋಡ್‌ಗಟ್ಟಲೇ ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಇದೆ ಎಂದು ಪುನೀತ್ ಕೆರೆಹಳ್ಳಿ ತಂಡ ದಾಳಿ ನಡೆಸಿತ್ತು. ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿ, ಶಾಂತಿ ಕದಡಿದ್ದರು. ಈ ಹಿನ್ನಲೆ ರಸ್ತೆಯಲ್ಲಿ ಗಲಾಟೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಹಲ್ಲೆ ಮಾಡಿದ್ದಾರೆಂದು ಅವರ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರಿಗೆ ದೂರು ಕೊಟ್ಟಿದ್ದರು. ಅಲ್ಲದೆ, ಕೆಲ ಪೊಲೀಸರು ಹೀರೋ ಆಗುವುದಕ್ಕೆ ಈ ರೀತಿ ಮಾಡುತ್ತಿದ್ದಾರೆ. ಇಂತಹ ಘಟನೆ ಆಗಬಾರ್ದು ಎಂದು ಮನವರಿಕೆ ಮಾಡಲು ಬಂದಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದರು.












Click it and Unblock the Notifications