ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.17 ರಿಂದ ಅ.2 ರವರೆಗೆ ವಿವಿಧ ಸೇವಾ ಕಾರ್ಯಕ್ರಮ: ಸಿ.ಟಿ. ರವಿ

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 04: ಸೆಪ್ಟಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ ಇರುವ ವಿವಿಧ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರ ಜನ್ಮದಿನ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಈ ಅವಧಿಯಲ್ಲಿ 'ಸೇವಾ ಪಾಕ್ಷಿಕ' ದಿನಾಚರಣೆ ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಭಾನುವಾರ ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ತಿಂಗಳ ಸೆಪ್ಟಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಇದೆ. ಸೆಪ್ಟಂಬರ್ 25ರಂದು ಬಿಜೆಪಿ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಹಾಗೂ ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇವಾ ಪಾಕ್ಷಿಕ ಆಚರಿಸಲಿದ್ದಾರೆ.

Karnataka weather:ದಕ್ಷಿಣ ಒಳನಾಡಿಗೆ 5 ದಿನ ಭಾರೀ ಮಳೆ, ರಾಜ್ಯದ ಉಷ್ಣಾಂಶ ಹೇಗಿದೆ?Karnataka weather:ದಕ್ಷಿಣ ಒಳನಾಡಿಗೆ 5 ದಿನ ಭಾರೀ ಮಳೆ, ರಾಜ್ಯದ ಉಷ್ಣಾಂಶ ಹೇಗಿದೆ?

ಸೆಪ್ಟಂಬರ್‌ 17ರಂದು ಪ್ರಧಾನಿ ಜನ್ಮದಿನ ಅಂಗವಾಗಿ ಬಿಜೆಪಿ ಯುವಾ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಿದೆ. ಪ್ರತಿ ಆಸ್ಪತ್ರೆಯಲ್ಲಿ ರಕ್ತ ದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಿದ್ದೇವೆ. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುವುದು ಎಂದು ವಿವರಿಸಿದರು.

ಕೆರೆ, ಬಾವಿ ಸ್ವಚ್ಚತಾ ಅಭಿಯಾನ

ಕೆರೆ, ಬಾವಿ ಸ್ವಚ್ಚತಾ ಅಭಿಯಾನ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ.

2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದರು.

ಕಾಂಗ್ರೆಸ್‌ ಅವಧಿಯ ಹಗರಣ ಬಯಲಿಗೆ

ಕಾಂಗ್ರೆಸ್‌ ಅವಧಿಯ ಹಗರಣ ಬಯಲಿಗೆ

ಇನ್ನು ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಂದು ಸುದೀರ್ಘವಾಗಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 65ರಿಂದ 80 ಪ್ರತಿಶತದಷ್ಟಿದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ.

ರಾಜಕಾಲುವೆ ಒತ್ತುವರಿ ಯಾವಾಗಿನಿಂದ?

ರಾಜಕಾಲುವೆ ಒತ್ತುವರಿ ಯಾವಾಗಿನಿಂದ?

ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ ಮೂರು ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರ್ಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಕೆರೆಗಳನ್ನು ಅಕ್ರಮ ಬಡಾವಣೆಯಾಗಿ ನಿರ್ಮಿಸಿದವರು ಯಾರು? ಅವರೆಲ್ಲರೂ ಉತ್ತರಿಸಬೇಕಾಗುತ್ತದೆ ಎಂದು ಸುದ್ದಿಗಾರರ ಕೆಲವು ಸಿ.ಟಿ.ರವಿ ಉತ್ತರಿಸಿದರು.

ವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್, ಹೊಸ ಸಿಇಟಿ Ranking ಪ್ರಕಟಿಸಲು ಆದೇಶವಿದ್ಯಾರ್ಥಿಗಳ ನೆರವಿಗೆ ಹೈಕೋರ್ಟ್, ಹೊಸ ಸಿಇಟಿ Ranking ಪ್ರಕಟಿಸಲು ಆದೇಶ

ಅತೀವೃಷ್ಟಿಗೂ ಎಚ್‌ಡಿಕೆಯೇ ಕಾರಣ

ಅತೀವೃಷ್ಟಿಗೂ ಎಚ್‌ಡಿಕೆಯೇ ಕಾರಣ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ ಎಂದು ಕೇಳಿದರು. ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಅತಿ ಹೆಚ್ಚು ಮಳೆ ಬಂದಿರಬೇಕು ಎಂದು ನುಡಿದರು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ. ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ ದೇಶದ ತುಂಬೆಲ್ಲ ಮಳೆಯಾಗಿದೆ ಎಂದು ಅವರು ಲೇವಡಿ ಮಾಡಿದರು.

English summary
On the occasion of birthdays of various celebrities including Mahatma Gandhi and Narendra Modi, Seva Pakshika will be observed from September 17th to October 2nd, said BJP National General Secretary CT Ravi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X