ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಖುಲಾಸೆ

By Gururaj
|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪನವರಿಗೆ ವಿಶೇಷ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್ | Oneindia Kannada

ಬೆಂಗಳೂರು, ಆಗಸ್ಟ್ 28 : ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಖುಲಾಸೆಗೊಂಡಿದ್ದಾರೆ. ತಾಂತ್ರಿಕ ಕಾರಣಗಳನ್ನು ನೀಡಿ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಸಹ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಿತ್ತು.

ಯಡಿಯೂರಪ್ಪ, ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ಯಡಿಯೂರಪ್ಪ, ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Sessions court acquits Yeddyurappa in 15 denotification cases

ಸಿರಾಜಿನ್ ಬಾಷಾ ಮತ್ತು ಬಾಲಕೃಷ್ಣ ಅವರು ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ದೂರು ಸಲ್ಲಿಸುವ ಮೊದಲು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ, ಪ್ರಕರಣಗಳಿಂದ ಖುಲಾಸೆಗೊಳಿಸಲಾಗಿದೆ.

ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು ಯಾವುವು?ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು ಯಾವುವು?

ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದರು. ಎಲ್ಲಾ ಪ್ರಕರಣದಲ್ಲಿಯೂ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಹಿಂದೆ ಎಲ್ಲಾ ಪ್ರಕರಣಗಳಲ್ಲಿ ಯಡಿಯೂರಪ್ಪ ಅವನ್ನು ಕರ್ನಾಟಕ ಹೈಕೋರ್ಟ್ ಸಹ ಖುಲಾಸೆಗೊಳಿಸಿತ್ತು.

ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಎಸ್‌.ಆರ್.ಹಿರೇಮಠ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಕೋರ್ಟ್ ಖುಲಾಸೆ ಮಾಡಿತ್ತು.

English summary
Bengaluru sessions court on August 28, 2018 acquitted Karnataka BJP president B.S.Yeddyurappa from 15 denotification cases inducing Rachenahalli case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X