ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಲಂಕೇಶ್ ಹತ್ಯೆ : ಹೊಟ್ಟೆ ಮಂಜನ ಜಾಮೀನು ಅರ್ಜಿ ವಜಾ

By Gururaj
|
Google Oneindia Kannada News

ಬೆಂಗಳೂರು, ಜುಲೈ 09 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿ ಕೆ.ಟಿ.ನವೀನ್ ಕುಮಾರ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೊದಲ ಆರೋಪಿ ನವೀನ್ ಕುಮಾರ್.

ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜುಲೈ 7ರಂದು ಅರ್ಜಿಯ ವಿಚಾರಣೆ ಮುಕ್ತಾಯಗೊಳಿಸಿದ್ದ ಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನಗೌರಿ ಲಂಕೇಶ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

ಸೋಮವಾರ ನ್ಯಾಯಾಧೀಶ ರಾಮಲಿಂಗೇಗೌಡ ಅವರು ತೀರ್ಪು ಪ್ರಕಟಿಸಿದರು. ಕೆ.ಟಿ.ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದರಿಂದಾಗಿ ನವೀನ್ ಕುಮಾರ್ ಜೈಲುವಾಸ ಮುಂದುವರೆಯಲಿದೆ.

Sessions court rejects KT Naveen Kumar bail plea

2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ.

ಮಂಪರು ಪರೀಕ್ಷೆಗೆ ಗೌರಿ ಹತ್ಯೆ ಆರೋಪಿ ಒಪ್ಪಿಗೆ, ಹೊರ ಬರುತ್ತಾ ಸತ್ಯ?ಮಂಪರು ಪರೀಕ್ಷೆಗೆ ಗೌರಿ ಹತ್ಯೆ ಆರೋಪಿ ಒಪ್ಪಿಗೆ, ಹೊರ ಬರುತ್ತಾ ಸತ್ಯ?

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಟಿ.ನವೀನ್ ಕುಮಾರ್ ಅವರನ್ನು ಮೊದಲು ಬಂಧಿಸಲಾಗಿತ್ತು. ಪರುಶರಾಮ್ ವಾಘ್ಮೋರೆ, ಮನೋಹರ ದುಂಡಪ್ಪ ಯಡವೆ, ಅಮೋಲ್ ಕಾಳೆ, ಅಮಿತ್ ದಗ್ವೇಕರ್, ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ.

English summary
Bengaluru sessions court on Monday, July 9, 2018 rejected the bail plea of K.T.Naveen Kumar. K.T. Naveen Kumar alias Hotte Manja the first arrested accused in the murder case of journalist, activist Gauri Lankesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X