Breaking; ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ, ಆದೇಶ
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು, ಫೆಬ್ರವರಿ 20; ಕರ್ನಾಟಕ ಸರ್ಕಾರ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದೆ. ಕಾರ್ಕಳ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಸೋಮವಾರ ಸಚಿವರು ತಮ್ಮ ಟ್ವೀಟ್‌ನಲ್ಲಿ ಈಡಿಗ-ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮಹತ್ವದ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.
ಈಡಿಗ- ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮಹತ್ವದ ಆದೇಶ ಹೊರಡಿಸಿದೆ. ಈ ಆದೇಶದ ಮೂಲಕ ನುಡಿದಂತೆ ನಡೆದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsbommai ಯವರಿಗೆ ನನ್ನ ಧನ್ಯವಾದಗಳು . pic.twitter.com/pTiF0k1bOO
— Sunil Kumar Karkala (@karkalasunil) February 20, 2023
ಈ ಆದೇಶದ ಮೂಲಕ ನುಡಿದಂತೆ ನಡೆದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ನನ್ನ ಧನ್ಯವಾದಗಳು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರದ ಆದೇಶ; ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಷಾಹೀನ್ ಪರ್ವೀನ್ ಕೆ. ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.
ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿಯಲ್ಲಿ ಈಡಿಗ-ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ.
ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2'ಎ'ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ ಎಂದು ತಿಳಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 30/03/2002ರ ಜಾತಿ ಪಟ್ಟಿಯಲ್ಲಿ ಪವರ್ಗ 2'ಎ' ರಲ್ಲಿ ಕ್ರಮಸಂಖ್ಯೆ 4(a)ಯಿಂದ (z) ವರೆಗೆ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದೆ ಎಂದು ತಿಳಿಸಲಾಗಿದೆ.












Click it and Unblock the Notifications