ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2011ರ ಕೆಪಿಎಸ್ಸಿ ನೇಮಕಾತಿಗೆ ತಡೆ ನೀಡಿದ ಹೈಕೋರ್ಟ್

By Mahesh
|
Google Oneindia Kannada News

ಬೆಂಗಳೂರು, ಜೂನ್ 21: ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಬುಧವಾರ ಕಹಿ ಸುದ್ದಿ ಸಿಕ್ಕಿದೆ. 2011ರ ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

2016 : ಕೆಪಿಎಸ್ಸಿ ನೇಮಕಾತಿ ವಿವಾದ: 362 ಅಭ್ಯರ್ಥಿಗಳಿಗೆ ಶುಭ ಸುದ್ದಿ2016 : ಕೆಪಿಎಸ್ಸಿ ನೇಮಕಾತಿ ವಿವಾದ: 362 ಅಭ್ಯರ್ಥಿಗಳಿಗೆ ಶುಭ ಸುದ್ದಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 362 ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡಿದ್ದ ಆಯ್ಕೆ ಪಟ್ಟಿಯನ್ನು ಕರ್ನಾಟಕ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ)2016ರಲ್ಲಿ ರದ್ದುಗೊಳಿಸಿತ್ತು.

Setback for KPSC candidates HC stays recruitment of 362 candidates 2011 batch

ಆದರೆ, ಈ ಕುರಿತಂತೆ ಬುಧವಾರ(ಜೂನ್ 21) ದಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಮುಂದಿನ ಆದೇಶದವರೆಗೂ ನೇಮಕಾತಿ ಆದೇಶ ನೀಡಬಾರದೆಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಹಗರಣದಲ್ಲಿ ಮಂಗಳಾ ಶ್ರೀಧರ್ ಪಾತ್ರವೇನು?ಹಗರಣದಲ್ಲಿ ಮಂಗಳಾ ಶ್ರೀಧರ್ ಪಾತ್ರವೇನು?

ಏನಿದು ಪ್ರಕರಣ? : 2011ರಲ್ಲಿ ಕೆಪಿಎಸ್ ಸಿ A ಹಾಗೂ ಬಿ ದರ್ಜೆ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು.

English summary
Setback for KPSC candidates, Karnataka High Court today upheld its order not to issue appointment orders to 362 KPSC candidates who are selected for the Group A and B posts of gazetted probationers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X