ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೇಂದ್ರದ ಅಂಗಳದಲ್ಲಿ ಚೆಂಡು, ಮುಂದೇನು?

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಕನ್ನಡಿಗರ ಜೀವನದಿ ಕಾವೇರಿ ಕನ್ನಡಿಗರ ಪಾಲಿಗೆ ಹೆಚ್ಚಾಗಿ ಒಲಿದಿದ್ದಾಳೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ನ್ಯಾಯಪೀಠ ನೀಡಿರುವ ತೀರ್ಪು- ತಮಿಳುನಾಡು ಪಾಲಿಗೆ ಕಹಿಯಾಗಿದ್ದರೆ, ಕರ್ನಾಟಕದ ಪಾಲಿಗೆ ಸಿಹಿಯಾಗಿದೆ. ಆದರೆ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಇನ್ನೂ ಜನರಲ್ಲಿ ಆತಂಕ ಇದ್ದೇ ಇದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ನ್ಯಾ ದೀಪಕ್ ಮಿಶ್ರಾ ಅವರು ಅಂತಿಮ ತೀರ್ಪು ಓದಿದರು.

ಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿಕಾವೇರಿ ಅಂತಿಮ ತೀರ್ಪು : ತಮಿಳುನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ

ಸುಪ್ರೀಂಕೋರ್ಟಿನಿಂದ ಎರಡು ಬಾರಿ ಮಧ್ಯಂತರ ತೀರ್ಪು ಹಾಗೂ ಕಾವೇರಿ ಮೇಲುಸ್ತುವಾರಿ ಸಮಿತಿಯಿಂದ ಒಮ್ಮೆ ಬಂದಿರುವ ತೀರ್ಪಿನಿಂದ ಹಿನ್ನಡೆ ಅನುಭವಿಸಿದ್ದ ಕರ್ನಾಟಕಕ್ಕೆ ಈ ಬಾರಿ ತಕ್ಕಮಟ್ಟಿನ ನಿರಾಳತೆ ಸಿಕ್ಕಿದೆ.

ಆದರೆ, ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠದ ತೀರ್ಪಿನ ಅನ್ವಯ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ಕರ್ನಾಟಕ ರಾಜ್ಯಕ್ಕೆ ಮರಣ ಶಾಸನವಾಗಲಿದೆ ಎಂಬ ಭಯ ಇದೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನೀತಿ ಸಂಹಿತೆ ಅನ್ವಯವಿಲ್ಲ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ನೀತಿ ಸಂಹಿತೆ ಅನ್ವಯವಿಲ್ಲ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ಯಾರಿರಲಿದ್ದಾರೆ?

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ಯಾರಿರಲಿದ್ದಾರೆ?

ಈ ಮಂಡಳಿಯಲ್ಲಿ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ರಾಜ್ಯಗಳ ಸದಸ್ಯರು, ಕೃಷಿ ಮತ್ತು ನೀರಾವರಿ ತಜ್ಞರು, ಜಲ ಆಯೋಗದ ಅಧಿಕಾರಿಗಳು ಇರಲಿದ್ದಾರೆ. ಎಲ್ಲರನ್ನು ಕೇಂದ್ರ ಸರ್ಕಾರ ನೇಮಿಸಲಿದೆ. ಮಂಡಳಿ ರಚನೆ ಮಾಡಲು ಅಟಾರ್ನಿ ಜನರಲ್ ಅವರ ಸಲಹೆ ಕೇಳುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಆರು ವಾರಗಳಲ್ಲಿ ಮಂಡಳಿ ರಚನೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ನಿರ್ವಹಣಾ ಮಂಡಳಿ ಏನು ಪರಿಣಾಮ

ನಿರ್ವಹಣಾ ಮಂಡಳಿ ಏನು ಪರಿಣಾಮ

ಒಮ್ಮೆ ಈ ಮಂಡಳಿ ರಚನೆಯಾದರೆ ಕಾವೇರಿ ಮೇಲುಸ್ತುವಾರಿ ಸಮಿತಿ ಬೆಲೆ ಕಳೆದುಕೊಳ್ಳಲಿದೆ. ಕಾವೇರಿ ನೀರು ಇರುವ ಕೆಆರ್ ಎಸ್, ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟಿನ ಮೇಲೆ ಕರ್ನಾಟಕ ಸರ್ಕಾರ ನಿಯಂತ್ರಣ ಕಳೆದುಕೊಳ್ಳಲಿದೆ. ತಮಿಳುನಾಡಿಗೆ ಯಾವಾಗ ನೀರು ಬಿಡಬೇಕು? ಎಷ್ಟು ನೀರು ಬಿಡಬೇಕು ಎಂಬುದನ್ನು ಮಂಡಳಿ ನಿರ್ಧರಿಸಲಿದೆ ಎಂಬ ಆತಂಕವಿದೆ. ಈ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ.

ಸದ್ಯದ ಆದೇಶ ಏನಿದೆ?

ಸದ್ಯದ ಆದೇಶ ಏನಿದೆ?

ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು, 4.75 ಟಿಎಂಸಿ ನೀರು ಬೆಂಗಳೂರಿನ ಕುಡಿಯುವ ನೀರಿಗೆ ಬಳಕೆ ಮಾಡಬಹುದು. ಕರ್ನಾಟಕದಿಂದ ತಮಿಳುನಾಡಿಗೆ ವಾರ್ಷಿಕವಾಗಿ 177 ಟಿಎಂಸಿ ಅಡಿ ಕಾವೇರಿ ಬಿಡಬೇಕು, ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಲಭ್ಯ.

ಎಲ್ಲಿ ತನಕ ಆದೇಶ ಜಾರಿಗೆ ಬರಲಿದೆ

ಎಲ್ಲಿ ತನಕ ಆದೇಶ ಜಾರಿಗೆ ಬರಲಿದೆ

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ನ್ಯಾ ದೀಪಕ್ ಮಿಶ್ರಾ ಅವರು ನೀಡಿದ ತೀರ್ಪು ಮುಂದಿನ 15 ವರ್ಷಗಳ ಕಾಲ ಅನ್ವಯವಾಗಲಿದೆ.

English summary
Karnataka has been opposing constitution of the Cauvery Water Management Board (CWMB) fearing it would lose autonomy over the river. Tamil Nadu has been demanding that the Centre set up the board to end the decades old water-sharing dispute. SC has directed to form CWSB within 6 weeks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X