ಸೇವಾ ಸಿಂಧು ನೋಂದಣಿ; ಸರ್ಕಾರದ ಸ್ಪಷ್ಟನೆ ಕೇಳಿದ ಹೈಕೋರ್ಟ್

ಬೆಂಗಳೂರು, ಆಗಸ್ಟ್ 14 : ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಕುರಿತು ಕರ್ನಾಟಕ ಹೈಕೋರ್ಟ್ ಸ್ಪಷ್ಟನೆಯನ್ನು ಕೇಳಿದೆ.

Recommended Video

      CT Ravi ಪ್ರಕಾರ ನಡೆದ ಗೋಲಿಬಾರ್‌ಗೆ Zameer Ahmed ಡೈರೆಕ್ಟರ್ ಹಾಗು ಪ್ರೊಡ್ಯೂಸರ್ | Oneindia Kannada

      ಇಂದಿರಾ ಪ್ರಿಯದರ್ಶಿನಿ ಎಂಬುವವರು ಸಲ್ಲಿಸಿರುವ ಪಿಐಎಲ್ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಾಲಯ ಸ್ಪಷ್ಟನೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

      ಕೇಂದ್ರ ಗೃಹ ಇಲಾಖೆ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸುವಾಗ ಅಂತರ ರಾಜ್ಯಗಳ ನಡುವಿನ ಸಂಚಾರಕ್ಕೆ ಇದ್ದ ನಿರ್ಬಂಧ ತೆಗೆದುಹಾಕಿದೆ. ಆದರೆ, ಕರ್ನಾಟಕಕ್ಕೆ ತಮಿಳುನಾಡಿನಿಂದ ಆಗಮಿಸುವವರು ಏಕೆ ನೋಂದಣಿ ಮಾಡಿಕೊಳ್ಳಬೇಕು? ಎಂದು ಪಿಐಎಲ್‌ನಲ್ಲಿ ಪ್ರಶ್ನೆ ಮಾಡಲಾಗಿದೆ.

      Seva Sindhu Registration High Court Seeks Clarification From Govt

      ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿರ್ದೇಶನ ಇದ್ದರೂ ಯಾವ ನಿಯಮಗಳ ಅಡಿಯಲ್ಲಿ ಸೇವಾ ಸಿಂಧು ನೋಂದಣಿ ಕಡ್ಡಾಯ ಮಾಡಲಾಗಿದೆ? ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕೇಳಿದೆ.

      ಅಂತರಾಜ್ಯಗಳ ನಡುವಿನ ಸಂಚಾರ ನಿರ್ಬಂಧ ತೆರವುಗೊಂಡಿದೆ. ಆದರೆ, ಅಂತರಾಜ್ಯಗಳ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಜನರು ಮೊದಲು ನೋಂದಣಿ ಮಾಡಿಕೊಳ್ಳಬೇಕು.

      ಈ ನೋಂದಣಿ ಪಾಸ್ ರೀತಿಯಲ್ಲ. ಕೇವಲ ನೋಂದಣಿಯಾಗಿದೆ. ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವ ಜನರ ಲೆಕ್ಕವಿಡಲು ಇದು ಸಹಕಾರಿಯಾಗಲಿದೆ ಎಂದು ಕರ್ನಾಟಕ ಸರ್ಕಾರ ಹಿಂದೆ ಹೇಳಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+