ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರ ನಡೆದ ರಾಜ್ಯ ಸಚಿವ ಸಂಪುಟದ ಪ್ರಮುಖಾಂಶಗಳು

|
Google Oneindia Kannada News

ಬೆಂಗಳೂರು, ನ. 18: ಚಳಿಗಾಲದ ವಿಧಾನ ಮಂಡಲ ಅಧಿವೇಶನ, ವಿಜಯನಗರಕ್ಕೆ ಜಿಲ್ಲೆಯ ಸ್ಥಾನಮಾನ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಹಲವು ತೀರ್ಮಾನಗಳನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ ಅವರು ಸಂಪುಟದ ನಿರ್ಣಯಗಳ ಕುರಿತು ಮಾಹಿತಿ ನೀಡಿದ್ದಾರೆ. ಅವರು ನೀಡಿರುವ ಮಾಹಿತಿ ಹೀಗಿವೆ.

Several decisions were taken at the Cabinet meeting on Wednesday

* ಇದೇ ಡಿಸೆಂಬರ್ 7 ರಿಂದ 15ರವರಗೆ ವಿಧಾನಸಭೆಯ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಯಲಿದೆ.

* ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ಅಭಿವೃದ್ದಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ದಿ ನಿಗಮಕ್ಕೆ ಸಾಲ ಪಡೆಯಲು ಸಂಪುಟದಲ್ಲಿ ಅನುಮತಿ ನೀಡಲಾಗಿದೆ.

ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಸ್ತು ಎಂದ ಸಚಿವ ಸಂಪುಟವಿಜಯನಗರ ಜಿಲ್ಲೆ ಸ್ಥಾಪನೆಗೆ ಅಸ್ತು ಎಂದ ಸಚಿವ ಸಂಪುಟ

* ಹೊಸಪೇಟೆಯಲ್ಲಿ 13 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ.

* ಎಸ್‌ಸಿ, ಎಸ್‌ಟಿ ಮೀಸಲು ಪ್ರಮಾಣ ಹೆಚ್ಚಳ ನಿಗದಿಗೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಧಿಕಾರ. ನೀಡಲಾಗಿದೆ.

* 2021 ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ.

* ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿಗೆ ತಿದ್ದುಪಡಿ.

* ವಿಜಯನಗರ ಜಿಲ್ಲೆಯಾಗಿ ಘೋಷಣೆ ಮಾಡಲು ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ.

* ಪ್ರವಾಹ ಪೀಡಿತ ಜಿಲ್ಲೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡಿ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧಾರ.

ವಿರೋಧ ಯಾಕೆ? ಮಾಧುಸ್ವಾಮಿ ಪ್ರಶ್ನೆ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತವಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಮಾಧುಸ್ವಾಮಿ ಅವರು, ಮರಾಠಾ ಸಮುದಾಯ ಅಭಿವೃದ್ದಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು‌. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ದಿ ವಿಷಯದಲ್ಲಿ ಯಾಕೆ? ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ‌. ಆದರೂ ಅಭಿವೃದ್ದಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

English summary
Several decisions were taken at the Cabinet meeting on Wednesday, including the Winter Assembly session, District Status for Vijayanagar and the establishment of the Maratha Development Corporation. Addressing a news conference after the cabinet meeting in the Vidhanasoudha, Law Minister Madhuswamy given the Cabinet decisions. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X