ಏ.18ರ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ

ಬೆಂಗಳೂರು, ಏ. 7 : ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ನಡೆಸುತ್ತಿರುವ ಬಂದ್‌ಗೆ ಪ್ರತಿಯಾಗಿ ಕರ್ನಾಟಕದಲ್ಲಿ ಏ.18ರಂದು ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಒಂದು ದಿನದ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ.

ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಏ.18ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು. [ಏ.18ರಂದು ಕರ್ನಾಟಕ ಬಂದ್]

Vatal Nagaraj

ಏ.18ರಂದು ಕೆಎಸ್ಆರ್‌ಟಿಸಿ, ಬಿಎಂಟಿಸಿ, ಆಟೋ, ಟ್ಯಾಕ್ಸಿ, ಸರಕು ಸಾಗಣೆ ಲಾರಿಗಳ ಸಂಚಾರವನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ. ಹಾಲು ಮತ್ತು ಔಷಧಿ ವಾಹನಗಳು, ಆಂಬ್ಯುಲೆನ್ಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.[ಮೇಕೆದಾಟು ಯೋಜನೆ ವಿವಾದ ಏಕೆ, ಏನು?]

ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಈಗಾಗಲೇ ಬಂದ್‌ಗೆ ಬೆಂಬಲ ನೀಡಿವೆ. ಮೇಕೆದಾಟು ವಿಚಾರದ ಜೊತೆಗೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೂ ಅಗತ್ಯ ಅನುದಾನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು. [ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್]

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ, ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ['ಮೇಕೆದಾಟುವಿನಲ್ಲಿ ಕರ್ನಾಟಕ ಅಣೆಕಟ್ಟು ಕಟ್ಟಲು ಬಿಡೋಲ್ಲ']

ಸಾಹಿತ್ಯ ಪರಿಷತ್ ಬೆಂಬಲ : ವಿವಿಧ ಕನ್ನಡ ಪರ ಸಂಘಟನೆಗಳು ಏ.18ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ನೀಡಿದೆ. ಬಂದ್‌ಗೆ ಸಾಹಿತ್ಯ ಪರಿಷತ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.

ಏನಿದು ಯೋಜನೆ : 2013ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ಸರ್ಕಾರ ಮೊದಲು ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿತು. ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಆ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಒದಗಿಸುವುದು ಯೋಜನೆಯ ಉದ್ದೇಶ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+