Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ದಾಖಲೆಯ ಶೀತಗಾಳಿ ಬೀಸುವ ಮುನ್ಸೂಚನೆ: ಇಲ್ಲಿವೆ ಮುಂಜಾಗ್ರತಾ ಕ್ರಮಗಳು
Karnataka Weather: ರಾಜ್ಯದಲ್ಲಿ ಭಾರೀ ಚಳಿ ಮುಂದುವರೆದಿದೆ. ಹಾಗೆಯೇ, ಮುಂದಿನ ದಿನಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 18) ಬೆಳಗ್ಗೆ ದಟ್ಟ ಮಂಜಿನ ಜೊತೆ ಶೀತಗಾಳಿ ವಾತಾವರಣ ನಿರ್ಮಾಣವಾಗಿತ್ತು. ಇನ್ನೂ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಮನಾರ್ಹವಾಗಿ ಇಳಿಕೆಯಾಗಲಿದ್ದು, ಚಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ಕಡೆಗಳಲ್ಲಿ ದಾಖಲೆಯ ಚಳಿ ದಾಖಲಾಗಿದ್ದು, ಜನರು ತತ್ತರಿಸಿದ ಘಟನೆಗಳು ನಡೆದಿವೆ.
ಬೆಂಗಳೂರು ಸೇರಿದಂತೆ ರಾಜ್ಯದೆ ಹಲವು ಭಾಗಗಳಲ್ಲಿ ಥಂಡಿ ಹೆಚ್ಚಾಗಿದೆ. ಪರಿಣಾಮ ಜನಜೀವನ ಅಸ್ತವ್ಯಕ್ತಗೊಂಡಿದೆ. ಬೆಳಗ್ಗೆ 9 ಗಂಟೆಯಾದರೂ ಸಹ ದಟ್ಟ ಮಂಜಿನ ಜೊತೆ ಶೀತಗಾಳಿ ಬೀಸುತ್ತಿದೆ. ಇನ್ನೂ ಸಂಜೆಯೂ ಕೂಡ ಇದೇ ರೀತಿಯ ವಾತಾವರಣ ಮುಂದುವರೆಯುತ್ತಿದೆ. ಇದರಿಂದ ಈ ವೇಳೆ ಜನರು ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣ ಆಗಿಬಿಟ್ಟಿದೆ.
ಯೆಲ್ಲೋ ಅಲರ್ಟ್ ಘೋಷಣೆ: ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲೇ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಈ ಭಾಗಗಳ ಜನರು ಬೆದರಿದ್ದಾರೆ. ಇನ್ನೂ ಇಂದು (ಡಿಸೆಂಬರ್ 18) ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನ ಹವಾಮಾನ: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಲಿದೆ. ಅದರಲ್ಲೂ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ದಾಖಲೆಯ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಕರಾವಳಿ ಹಾಗೂ ಮಲೆನಾಡಿನ ವಾತಾವರಣ: ಕರಾವಳಿ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೆ, ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಮುಂದುವರೆಯಲಿದ್ದು, ಶೀತಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
ಮುಂಜಾಗ್ರತಾ ಕ್ರಮಗಳು: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಅದರಲ್ಲೂ, ಬೆಳಗ್ಗೆ ಮತ್ತು ಸಂಜೆ ವೇಳೆ ವಾಕಿಂಗ್ ಹೊರಾಟಾಗ ಮೈ ಬೆಚ್ಚಗಿಡುವ ಉಡುಪು ಹಾಗೂ ಟೋಪಿಯನ್ನು ಧರಿಸುವುದು ಉತ್ತಮ. ಅಲ್ಲದೆ, ಚಿಕ್ಕ ಮಕ್ಕಳನ್ನು ಈ ವೇಳೆ ಮನೆಯಿಂದ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು ಅಂತಲೂ ಸಲಹೆ ನೀಡಿಲಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications