Karnataka Weather: ರಾಜ್ಯದಲ್ಲಿ ಭೀಕರ ಚಳಿಗೆ ಬೆದರಿದ ಜನ: ಇಲ್ಲಿದೆ ಮುಂದಿನ ನಾಲ್ಕು ದಿನಗಳ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳಲ್ಲಿ ರಾಜಧಾನಿ ಬೆಂಗಳೂರು ಸೇರಿ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 12) ಬೆಳಗ್ಗೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಸಂಜೆಯೂ ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ. ಈ ನಡುವೆಯೇ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ ಎನ್ನುವ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಬೆಳಗ್ಗೆ ಹಾಗೂ ಸಂಜೆ ವೇಳೆ ತೀವ್ರ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದೆ.
ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿ ಮುಂದುವರೆದಿದ್ದು, ಈ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲದೆ, ಈಗಲೇ ಹಿಂಗಾದ್ರೆ ಮುಂದಿನ ದಿನಗಳಲ್ಲಿ ಏನೆಲ್ಲಾ ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ.
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಿದೆ. ಈಗಾಗಲೇ ಬೀದರ್‌ನಲ್ಲಿ ಬುಧವಾರ ಈ ವರ್ಷದ ಕನಿಷ್ಠ ತಾಪಮಾನ 9.2°C ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ಎರಡು ವಾರಗಳಲ್ಲಿ ತಾಪಮಾನವು 7°C ಸೆಲ್ಸಿಯಸ್‌ಗೆ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಮುಂದಿನ ದಿನಗಳಲ್ಲಿ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಸೇರಿದಂತೆ ಇನ್ನಿತರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ. ಈ ಭಾಗಗಳಲ್ಲಿ ಬೆಳಗ್ಗೆ 9 ಗಂಟೆಯಾದರೂ ಮಂಜಿನ ಜೊತೆ ಭೀಕರ ಚಳಿ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದ ಈ ವೇಳೆ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಜೆಯೂ ಕೂಡ ಇದೇ ರೀತಿಯ ವಾತಾವರಣ ಮುಂದುವರೆಯುತ್ತಿದೆ.
ಇನ್ನೂ ಮುಂದಿನ ನಾಲ್ಕು ದಿನಗಳವರೆಗೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಶೀತಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಚಳಿ ಆವರಿಸಿಬಿಟ್ಟಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಜನರು ಮನೆಯಿಂದ ಹೊರಬರದಂತಹ ಚಳಿ ವಾತಾವರಣ ನಿರ್ಮಾಣವಾಗುತ್ತಿದೆ. ಈ ನಡುವೆಯೂ ಮುಂದಿನ ಕೆಲವು ದಿನಗಳವರೆಗೆ ಕೆಲವೆಡೆ ಮಾತ್ರ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.












Click it and Unblock the Notifications