ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರಕಿಹೊಳಿ ಸಿಡಿ ಹಗರಣ: ನಗರ ಪೊಲೀಸ್ ಆಯುಕ್ತರ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಫೆ.8. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ಸಿಡಿ ಬಹಿರಂಗವಾದಗ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆನ್ನುವ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರು ಹಾಗೂ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Recommended Video

ಧರ್ಮ ಪಾಲಿಸುವುದು ತಪ್ಪಲ್ಲ, ಹಿಜಾಬ್ ಪರ ನಿಂತ ಡಿಕೆ ಶಿವಕುಮಾರ್ | Oneindia Kannada

ಈ ಮೂವರು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಈ ಆದೇಶ ನೀಡಿದ್ದಾರೆ.

ಇದರಿಂದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಕೇಂದ್ರ ವಿಭಾಗದ ಡಿಸಿಪಿ ಎಂಎನ್ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ಬಿ. ಮಾರುತಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.

Sex scandel: Big Relief for city polic chief and others: HC queshed proceedings

ನ್ಯಾಯಪೀಠ "ಅಧಿಕಾರಿಗಳು ತಪ್ಪು ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಮಾಹಿತಿ ಇಲ್ಲ. ಸಚಿವರ ಒತ್ತಡಕ್ಕೆ ಮಣಿದು ಎಸ್ ಐಟಿ ರಚನೆ ಮಾಡಿದ್ದಾರೆಂದು ಪರಿಗಣಿಸಿದರೂ ಸಹ ಅರ್ಜಿದಾರರಿಗೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸದೇ ಇರುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್ 166ಎ ಅಡಿ ಶಿಕ್ಷಾರ್ಹ ಅಪರಾಧವಲ್ಲ'' ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರಾದ ಪ್ರಸನ್ನಕುಮಾರ್, ಪ್ರಕರಣದ ಸಂಬಂಧ ದಿನೇಶ್ ಕಲ್ಲಹಳ್ಳಿ 2021ರ ಮಾ.2ರಂದು ನೀಡಿದ್ದ ದೂರಿನಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇರಲಿಲ್ಲ. ಜೊತೆಗೆ ಸಿಡಿ ನೀಡಿದ ಬಗ್ಗೆ ಮಾಹಿತಿ ಕೇಳಿದರೆ ಅದನ್ನೂ ನೀಡಲಿಲ್ಲ. ನಂತರ ದೂರುದಾರರೇ ಮಾ.7ರಂದು ಪತ್ರ ಬರೆದು ದೂರು ವಾಪಸ್ ಪಡೆಯುವುದಾಗಿ ತಿಳಿಸಿದ್ದರು ಎಂದು ವಿವರಿಸಿದ್ದರು.

ಅಲ್ಲದೆ, ಎಫ್ ಐಆರ್ ವಿಳಂಬ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವುದು ಕಬ್ಬನ್ ಪಾರ್ಕ್ ಪೊಲೀಸರು, ಆದರೆ ಇದರಲ್ಲಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಯವರನ್ನೂ ಸಹ ಪಾರ್ಟಿ ಮಾಡಲಾಗಿದೆ. ಜೊತೆಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪ್ರಕರಣದ ಎಲ್ಲ ವಿವರಗಳನ್ನು ಆಲಿಸದೆ ಏಕಾಏಕಿ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ:
ಸಿಡಿ ಪ್ರಕರಣ ಬೆಳಕಿಗೆ ಬಂದ ವೇಳೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಇದು ಐಪಿಸಿ ಸೆಕ್ಷನ್

166(ಎ) ಅಡಿ ಅಪರಾಧ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಮುಖ್ಯಸ್ಥ ಆದರ್ಶ ಬಿ ಅಯ್ಯರ್ ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ 2021ರ ನ.23ರಂದು ನಗರ ಪೊಲೀಸ್ ಆಯುಕ್ತ, ಕೇಂದ್ರ ವಿಭಾಗದ ಡಿಸಿಪಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರ ವಿರುದ್ಧ ಸಿಆರ್ ಪಿಸಿ ಸೆಕ್ಷನ್ 153(ಎ) ಅಡಿ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶ ರದ್ದು ಕೋರಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

English summary
Ramesh Jarakiholi CD Scandel: High Court cancels proceedings against city police commissioner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X