Muniratna: ನಿನ್ನ ನೋಡಿದ್ರೆ ಮೈಜುಮ್ ಎನಿಸುತ್ತೆ ಎಂದು ಮುನಿರತ್ನ ನನ್ನ ತಬ್ಬಿಕೊಂಡ್ರು! ಸಂತ್ರಸ್ತೆ ದೂರಿನಲ್ಲಿ ಹೇಳಿದ್ದೇನು?
ಬೆಂಗಳೂರು,ಸೆಪ್ಟೆಂಬರ್ 19: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಸಿಲುಕಿರುವ ಮಾಜಿ ಸಚಿವ ಹಾಗೂ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಕಷ್ಟ ಎದುರಾಗಿದ್ದು, ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆ ದೂರಿನಲ್ಲಿ ನೀಡಿರುವ ಅಂಶಗಳೇನು ಗೊತ್ತಾ..?
* ಕೋವಿಡ್ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಕರೆ ಮಾಡಿದ್ದ ಮುನಿರತ್ನ
* ನಮಸ್ತೆ ಲೀಡರ್ ನಾನು ನಿಮ್ಮ ಭಾಗದ ಶಾಸಕ ನನ್ನನ್ನು ಬಂದು ಭೇಟಿ ಮಾಡಿ ಅಂತ ಕರೆ ಮಾಡಿ ಎಂದಿದ್ದ ಮುನಿರತ್ನ
* ಅದರಂತೆ ಭೇಟಿ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು
* ಆಗ್ಗಾಗ್ಗೆ ವಿಡೀಯೊ ಕಾಲ್ ನಲ್ಲಿ ಮಾತನಾಡ್ತಿದ್ರು
* ಈ ವೇಳೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ ನಾನು ನಿರಾಕರಿಸಿದ್ದೆ
* ಸ್ಪಾಟ್ ವೊಂದಕ್ಕೆ ಬರೋದಕ್ಕೆ ಹೇಳಿ ನಿನ್ನ ನೋಡಿದ್ರೆ ಮೈ ಜುಮ್ಮೆನ್ನುತ್ತದೆ ಎಂದು ಹೇಳಿ ತಬ್ಬಿಕೊಳ್ಳಲು ಮುಂದಾದ್ರು
* ನಾನು ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದರು

* ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ಶಾಸಕನಿದ್ದೇನೆ ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಅಂತಾ ಹೆದರಿಸಿ ಅತ್ಯಾಚಾರ ಎಸಗಿದ್ರು
* ಅತ್ಯಾಚಾರದ ಬಳಿಕ ಈ ರೂಂ ನಲ್ಲಿ ಸೀಕ್ರೆಟ್ ವಿಡೀಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದ್ದು , ನಿನ್ನ ವಿಡೀಯೊ ಎಡಿಟ್ ಮಾಡಿ ಹಂಚುತ್ತೇನೆ, ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ಬಳಸಿಕೊಂಡರು
* ಜೊತೆಗೆ ಚಿತ್ರೀಕರಿಸಿದ ವಿಡೀಯೊಗಳನ್ನ ಟಿವಿಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ
* ಇದೇ ವಿಡೀಯೊ ಇಟ್ಕೊಂಡು 2020 ರಿಂದ 2022 ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್ ಗು ಬಳಕೆ ಮಾಡಿಕೊಂಡಿದ್ದಾರೆ.
* ಹೇಳಿದಂತೆ ಕೇಳಲಿಲ್ಲ ಅಂದ್ರೆ ಗಂಡ ಮತ್ತು ಮಕ್ಕಳಿಗೆ ವಿಡೀಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ.
* ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜೊತೆ ಸೇರಿ ಆತ ಹೇಳಿದವರನ್ನ ಹನಿಟ್ರ್ಯಾಪ್ ಮಾಡಿಸಿದ್ದಾರೆ.
* ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
7 ಮಂದಿ ವಿರುದ್ಧ FIR!
ಎ1 ಮುನಿರತ್ನ ನಾಯ್ಡು
ಎ2 ವಿಜಯ್ ಕುಮಾರ್
ಎ3 ಸುಧಾಕರ್
ಎ4 ಕಿರಣ್ ಕುಮಾರ್
ಎ5 ಲೋಹಿತ್ ಗೌಡ
ಎ6 ಮಂಜುನಾಥ್
ಎ7 ಲೋಕಿ












Click it and Unblock the Notifications