POCSO Case: ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಆರೋಪ; ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಮಾರ್ಚ್ 15: ಬಿಜೆಪಿ ಹಿರಿಯ ನಾಯಕಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಘಟನೆ ಸಂಬಂಧ ತನಿಖೆ ನಡೆಸುವಂತೆ ಸೂಚನೆ ನೀಡಿದೆ.
ಹೌದು, ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇನ್ನೂ ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಮನೆಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ನಾನು ಸ್ವಲ್ಪ ಹಣವನ್ನ ನೀಡಿದ್ದೆ. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ. ಈ ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications