ಲೈಂಗಿಕ ದೌರ್ಜನ್ಯ: ಇನ್ನುಮುಂದೆ ಆನ್‌ಲೈನ್‌ನಲ್ಲೇ ದೂರು ನೀಡಿ
ಬೆಂಗಳೂರು, ನವೆಂಬರ್ 28: ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತ ದೂರನ್ನು ಇನ್ನುಮುಂದೆ ಆನ್‌ಲೈನ್‌ನಲ್ಲಿಯೇ ನೀಡಬಹುದಾಗಿದೆ.
ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸುಲಭವಾಗಿ ಆರೋಪಿಗಳ ಮೇಲೆ ಕಣ್ಣಿಡಲು ಸಾಧ್ಯವಾಗುತ್ತದೆ.
ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರಗಳಿಗೆ ಕೇಂದ್ರವು ನಾಲ್ಕು ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧ ಕೃತ್ಯಗಳ ಕುರಿತು ದೇಶದ ಯಾವುದೇ ಮೂಲೆಯಿಂದಲೂ ಆನ್‌ಲೈನ್ ಮೂಲಕ ಪೊಲೀಸರಿಗೆ ಸೂರು ನೀಡಬಹುದಾಗಿದೆ.

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ತನಿಖಾ ದಳದ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರತ್ಯೇಕ ಲ್ಯಾಬ್ ಸ್ಥಾಪನೆಯಾಗಿದೆ. ಇದರಲ್ಲಿ ಸುಮಾರು 15 ಸಾವಿರ ಆರೋಪಿಗಳ ಮಾಹಿತಿ ಸಂಗ್ರಹಕ್ಕೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದರಿಂದ ದುಷ್ಟರಿಗೆ ಮತ್ತಷ್ಟು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು ಈ ಕೃತ್ಯಗಳಲ್ಲಿ ಪಾಲ್ಗೊಳ್ಳುವ ಕಿಡಿಗೇಡಿಗಳನ್ನು ಬಗ್ಗಯ ಬಡೆಯಲು ಯೋಜಿಸಿತು. ಇದಕ್ಕಾಗಿ ರಾಜ್ಯಗಳ ಪೊಲೀಸರುಗಳನ್ನು ಒಳಗೊಂಡಂತೆ ಒಂದೇ ಸೂರಿನಡಿ ಕಾರ್ಯ ನಿರ್ವಹಣೆಗೆ ನಿರ್ಧರಿಸಿದ ಸರ್ಕಾರವು ಮಹಿಳೆ ಮತ್ತು ಮಕ್ಕಳ ಮೇಲಿನ ಸೈಬರ್ ಅಪರಾಧ ನಿಯಂತ್ರಣ ಎಂಬ ಯೋಜನೆ ಜಾರಿಗೆ ಮುಂದಾಗಿದೆ.












Click it and Unblock the Notifications