ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ದೌರ್ಜನ್ಯ: ಇನ್ನುಮುಂದೆ ಆನ್‌ಲೈನ್‌ನಲ್ಲೇ ದೂರು ನೀಡಿ

|
Google Oneindia Kannada News

ಬೆಂಗಳೂರು, ನವೆಂಬರ್ 28: ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತ ದೂರನ್ನು ಇನ್ನುಮುಂದೆ ಆನ್‌ಲೈನ್‌ನಲ್ಲಿಯೇ ನೀಡಬಹುದಾಗಿದೆ.

ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸುಲಭವಾಗಿ ಆರೋಪಿಗಳ ಮೇಲೆ ಕಣ್ಣಿಡಲು ಸಾಧ್ಯವಾಗುತ್ತದೆ.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರಗಳಿಗೆ ಕೇಂದ್ರವು ನಾಲ್ಕು ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಮಹಿಳೆ ಮತ್ತು ಮಕ್ಕಳ ಮೇಲಿನ ಅಪರಾಧ ಕೃತ್ಯಗಳ ಕುರಿತು ದೇಶದ ಯಾವುದೇ ಮೂಲೆಯಿಂದಲೂ ಆನ್‌ಲೈನ್ ಮೂಲಕ ಪೊಲೀಸರಿಗೆ ಸೂರು ನೀಡಬಹುದಾಗಿದೆ.

Sexual harrasement: Victims can file online complaint

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ತನಿಖಾ ದಳದ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರತ್ಯೇಕ ಲ್ಯಾಬ್ ಸ್ಥಾಪನೆಯಾಗಿದೆ. ಇದರಲ್ಲಿ ಸುಮಾರು 15 ಸಾವಿರ ಆರೋಪಿಗಳ ಮಾಹಿತಿ ಸಂಗ್ರಹಕ್ಕೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದರಿಂದ ದುಷ್ಟರಿಗೆ ಮತ್ತಷ್ಟು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ

ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು ಈ ಕೃತ್ಯಗಳಲ್ಲಿ ಪಾಲ್ಗೊಳ್ಳುವ ಕಿಡಿಗೇಡಿಗಳನ್ನು ಬಗ್ಗಯ ಬಡೆಯಲು ಯೋಜಿಸಿತು. ಇದಕ್ಕಾಗಿ ರಾಜ್ಯಗಳ ಪೊಲೀಸರುಗಳನ್ನು ಒಳಗೊಂಡಂತೆ ಒಂದೇ ಸೂರಿನಡಿ ಕಾರ್ಯ ನಿರ್ವಹಣೆಗೆ ನಿರ್ಧರಿಸಿದ ಸರ್ಕಾರವು ಮಹಿಳೆ ಮತ್ತು ಮಕ್ಕಳ ಮೇಲಿನ ಸೈಬರ್ ಅಪರಾಧ ನಿಯಂತ್ರಣ ಎಂಬ ಯೋಜನೆ ಜಾರಿಗೆ ಮುಂದಾಗಿದೆ.

English summary
Sexual harassment and rape case victims can file online complaint through mobile application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X