ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಅಧ್ಯಕ್ಷರಾಗಿ ಷಡಕ್ಷರಿ ಸ್ವಾಮಿ ನೇಮಕ

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಷಡಕ್ಷರಿ ಸ್ವಾಮಿ ನೇಮಕಗೊಂಡಿದ್ದಾರೆ. ಕಳೆದ 8 ತಿಂಗಳಿನಿಂದ ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯ ನೇಮಕದ ವಿಚಾರದಲ್ಲಿ ಹಗ್ಗ-ಜಗ್ಗಾಟ ನಡೆದಿತ್ತು.

ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಪಾಲ ವಜುಭಾಯಿ ವಾಲ ಶನಿವಾರ ಒಪ್ಪಿಗೆ ನೀಡಿದ್ದಾರೆ. ಕೆಪಿಎಸ್‌ಸಿಯ ಹಂಗಾಮಿ ಅಧ್ಯಕ್ಷರಾಗಿದ್ದ ಷಡಕ್ಷರಿ ಅವರನ್ನು ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ ಶಿಫಾರಸು ಮಾಡಿತ್ತು.

ಕೆಪಿಎಸ್ ಸಿ ಪರೀಕ್ಷೆ ಅಕ್ರಮ; ಒಟ್ಟು 14 ಆರೋಪಿಗಳ ಬಂಧನಕೆಪಿಎಸ್ ಸಿ ಪರೀಕ್ಷೆ ಅಕ್ರಮ; ಒಟ್ಟು 14 ಆರೋಪಿಗಳ ಬಂಧನ

ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆ ಕಳೆದ 8 ತಿಂಗಳಿನಿಂದ ಖಾಲಿ ಇತ್ತು. ಆದರೆ, ಮೈತ್ರಿ ಸರ್ಕಾರದಲ್ಲಿ ಅಧ್ಯಕ್ಷರನ್ನು ನೇಮಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಆದ್ದರಿಂದ, ಅಧ್ಯಕ್ಷರ ನೇಮಕ ವಿಳಂಬವಾಗಿತ್ತು.

ಉದ್ಯೋಗ ಕೊಡಿಸುವುದಾಗಿ ವಂಚನೆ : ಶ್ಯಾಂ ಭಟ್ ವಿರುದ್ಧ ಎಫ್‌ಐಆರ್‌ಉದ್ಯೋಗ ಕೊಡಿಸುವುದಾಗಿ ವಂಚನೆ : ಶ್ಯಾಂ ಭಟ್ ವಿರುದ್ಧ ಎಫ್‌ಐಆರ್‌

Shadakshari Swamy New Chairman Of KPSC

ಎಚ್. ಡಿ. ಕುಮಾರಸ್ವಾಮಿ 1998ನೇ ಬ್ಯಾಚ್ ಐಎಎಸ್ ಅಧಿಕಾರಿ ಕರಿಗೌಡ ನೇಮಕಕ್ಕೆ ಆಸಕ್ತಿ ತೋರಿದ್ದರು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಷಡಕ್ಷರಿ ಸ್ವಾಮಿ ನೇಮಕಕ್ಕೆ ಒಲವು ಹೊಂದಿದ್ದರು. ಸಚಿವ ಡಿ. ಕೆ. ಶಿವಕುಮಾರ್ ಕೆಪಿಎಸ್‌ಸಿ ಸದಸ್ಯರಾಗಿದ್ದ ರಘುನಂದನ್ ರಾಮಣ್ಣ ಪರ ಬ್ಯಾಟಿಂಗ್ ಮಾಡಿದ್ದರು.

1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು1998ರ ಕೆಪಿಎಸ್‌ಸಿ ಹಗರಣ, ಹೈಕೋರ್ಟ್ ಮಹತ್ವದ ತೀರ್ಪು

ಇದರಿಂದಾಗಿ ಕೆಪಿಎಸ್‌ಸಿ ಅಧ್ಯಕ್ಷರ ನೇಮಕ ಕಗ್ಗಂಟಾಗಿತ್ತು. ಆಯೋಗದ ಅಧ್ಯಕ್ಷ ಸ್ಥಾನ ಸೇರಿದಂತೆ 4 ಸದಸ್ಯ ಸ್ಥಾನವೂ ಖಾಲಿ ಇದೆ. ಈಗ ಸರ್ಕಾರ ಅಧ್ಯಕ್ಷರ ನೇಮಕ ಮಾಡಿದೆ. ಸದಸ್ಯರ ನೇಮಕದ ಬಗ್ಗೆಯೂ ಸರ್ಕಾರ ಗಮನ ಹರಿಸಲಿದೆ.

English summary
Shadakshari Swamy appointed as the chairman of Karnataka Public Service Commission (KPSC). Post vacant from past 8 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X