Shakti Scheme: ಒಂದು ಕೋಟಿ ಸಮೀಪಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ

ರಾಜ್ಯಾದ್ಯಂತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡು ಶಕ್ತಿ ಯೋಜನೆ ಜಾರಿಯಾಗಿದ್ದು, ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮೂರೇ ದಿನದಲ್ಲಿ ಉಚಿತ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ 1 ಕೋಟಿ ಸಮೀಪಿಸಿದೆ.

ಮೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ 9,858,518 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇಷ್ಟು ಟಿಕೆಟ್‌ಗಳ ಒಟ್ಟು ಮೌಲ್ಯ ಸುಮಾರು 21 ಕೋಟಿಯಾಗಿದೆ. ರಾಜ್ಯ ಸರ್ಕಾರ ಈ ಟಿಕೆಟ್ ವೆಚ್ಚವನ್ನು ಭರಿಸಲಿದೆ.

Shakti Scheme: Approximately 1 Crore Women Travel Free On State-Run Buses In Karnataka

ಮೊದಲ ದಿನ ಭಾನುವಾರ ರಾಜ್ಯಾದ್ಯಂತ 5,71,023 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದರು, ಎರಡನೇ ದಿನ ಮಹಿಳಾ ಪ್ರಯಾಣಿಕರ ಸಂಖ್ಯೆ 7 ಪಟ್ಟು ಹೆಚ್ಚಾಗಿದ್ದು, ಸೋಮವಾರ ರಾಜ್ಯಾದ್ಯಂತ 41,34, 726 ಮಹಿಳೆಯರು ಪ್ರಯಾಣ ಮಾಡಿದ್ದರು.

ಮೂರನೇ ದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು 50 ಲಕ್ಷ ದಾಟಿದೆ. ಮಂಗಳವಾರ 51,52,769 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಂಸ್ಥೆ ಸಾರಿಗೆಯಲ್ಲಿ 13,97,665 ಲಕ್ಷ, ಬಿಎಂಟಿಸಿ ಬಸ್‌ಗಳಲ್ಲಿ 20,56,856, ವಾಯುವ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ 11,08,930, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ 5,89,318 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

21 ಕೋಟಿ ರುಪಾಯಿ ಟಿಕೆಟ್ ಮೌಲ್ಯ

ಮೂರು ದಿನಗಳಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಸುಮಾರು 21 ಕೋಟಿ ರುಪಾಯಿಗಳಾಗಿದೆ. ಮೊದಲ ದಿನ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 1.40 ಕೋಟಿ ರುಪಾಯಿಗಳಾದರೆ, ಸೋಮವಾರ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 8.83 ಕೋಟಿ ರುಪಾಯಿಗಳಾಗಿತ್ತು, ಮಂಗಳವಾರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 10.82 ಕೋಟಿ ರುಪಾಯಿಗಳಾಗಿದೆ.

ಪುಣ್ಯಕ್ಷೇತ್ರಗಳಿಗೆ ಹರಿದು ಬಂದ ಜನಸಾಗರ

ಇನ್ನು ಉಚಿತ ಬಸ್ ಪ್ರಯಾಣದ ಪರಿಣಾಮ ರಾಜ್ಯದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಹಿಂದೂ ಧರ್ಮಿಯರ ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭಾರಿ ಜನಸಾಗರ ಹರಿದುಬಂದಿರುವುದಾಗಿ ವರದಿಯಾಗಿದೆ.

ಮಹಿಳೆಯರು ಕೂಡ ಉಚಿತ ಪ್ರಯಾಣ ಇರುವ ಕಾರಣ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಯೋಜನೆ ಹಾಕೊಂಡಿದ್ದಾರೆ. ಇನ್ನೂ ಕೆಲವು ಮಹಿಳೆಯರು ತಮಗೆ ಉಚಿತ ಭಾಗ್ಯ ಬೇಡ ಎಂದು ದುಡ್ಡುಕೊಟ್ಟು ಖರೀದಿ ಮಾಡಿ ಅದರ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+