Shakti scheme: ರಾಜ್ಯದ ಮಹಿಳೆಯರಿಗೆ KSRTCಯಿಂದ Good news, ಏನದು? - ಇಲ್ಲಿದೆ ವಿವರ
ಬೆಂಗಳೂರು, ನವೆಂಬರ್, 23: ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ವ್ಯವಸ್ಥೆ ಕಲ್ಪಿಸಿದೆ. ಅದರಲ್ಲೂ ಆಧಾರ್ ಕಾರ್ಡ್ ತೋರಿಸಿದ ಮಹಿಳೆಯರಿಗೆ ಮಾತ್ರ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗುತ್ತು. ಆದರೆ ಇದೀಗ ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಅದೇನು ಅಂತೀರಾ ಇಲ್ಲಿದೆ ನೋಡಿ ವಿವರ.
ಶಕ್ತಿ ಯೋಜನೆಯಡಿ ಮಹಿಳೆಯರು ಸಾರಿಗೆ (KSRTC) ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು ಮಾನ್ಯ ಮಾಡಲು ರಾಜ್ಯ ಸಾರಿಗೆ ಸಂಸ್ಥೆ ನಿರ್ಧಾರ ಮಾಡಿದೆ. ತಮ್ಮ ಮೊಬೈಲ್‌ನಲ್ಲಿರುವ ಆಧಾರ್ ಕಾರ್ಡ್ ಸಾಫ್ಟ್ ಕಾಪಿ ತೋರಿಸಿಯಾದರೂ ಕೂಡ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜಿನಲ್ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ನಿರಾಳರಾಗಿದ್ದಾರೆ. ಸರ್ಕಾರದ ಸೂಚನೆಗಳನ್ನು ಪಾಲಿಸಲು ಅಧಿಕಾರಿಗಳಿಗೆ, ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಾಯಾಣಿಸಲು ಅವಕಾಶ ನೀಡಲಾಗಿದೆ.
ಸಾರಿಗೆ (KSRTC) ಬಸ್‌ಗಳಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ಮೂಲ, ನಕಲು, ಡಿಜಿ ಲಾಕರ್‌ನಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದಲ್ಲಿ, ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶೀಘ್ರವೇ ಸ್ಮಾರ್ಟ್ ಕಾರ್ಡ್ ವಿತರಣೆ
ಅನ್ನಭಾಗ್ಯ ಯೋಜನೆ ಜಾರಿಯಾಗಿನಿಂದ ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಲವಾರು ಬದಲಾವಣೆಗಳನ್ನು ತರುತ್ತಲೇ ಇದೆ. ಇದೀಗ ಪಡಿತರದಾರರಿಗೆ ಚೀಟಿ ಜೊತೆಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್ ಕೊಡಲಾಗುವುದು. ಬಿಪಿಎಲ್ ಹಾಗೂ ಎಪಿಎಲ್ ಚೀಟಿದಾರರಿಗೆ ಇದನ್ನು ವಿತರಣೆ ಮಾಡಲಾಗುವುದು ಎಂದು ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಈ ಸ್ಮಾರ್ಟ್ ಕಾರ್ಡ್ ಬಹು ಉಪಯೋಗಿ ಕಾರ್ಡ್ ಆಗಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್‌ದಾರರಿಗೆ ಅಂದರೆ ಸುಮಾರು ₹4 ಕೋಟಿ ಜನರಿಗೆ ಹಣ ಸಂದಾಯ ಮಾಡಿದ್ದೇವೆ.
2.66 ಲಕ್ಷ ಕಾರ್ಡ್‌ದಾರರು ಪೋಸ್ಟಲ್ ಇಲಾಖೆಯಲ್ಲಿ ಖಾತೆ ತೆರೆದಿದ್ದು, ಅವರಿಗೂ ಹಣ ಸಂದಾಯ ಆಗುತ್ತಿದೆ ಎಂದರು.
ಶೇಕಡಾ 90ರಷ್ಟು ಅಧಿಕ ಕಾರ್ಡ್‌ದಾರರಿಗೆ ಈಗಾಗಲೇ ಹಣ ತಲುಪಿದೆ. ಇನ್ನೂ 7 ಲಕ್ಷ ಕಾರ್ಡ್‌ದಾರರು ಬ್ಯಾಂಕ್ ಖಾತೆ ತೆರೆಯದಿರುವುದು ಸೇರಿದಂತೆ ವಿವಿಧ ಸಮಸ್ಯೆಯಿದೆ. ಅಂತಹವರಿಗೆ ಹಣ ಸಂದಾಯ ಆಗಿಲ್ಲ. ಅವರಿಗೂ ಹಣ ಸಂದಾಯ ಮಾಡಲು ಇಲಾಖೆ ಅಧಿಕಾರಿಗಳೇ ಖುದ್ದಾಗಿ ಕಾರ್ಡ್‌ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಮೂಲಕ ಶೇಕಡಾ 100 ಸಾಧನೆ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.












Click it and Unblock the Notifications