ಮಹಿಳೆಯರ ಉಚಿತ ಪ್ರಯಾಣ: ಷರತ್ತುಗಳು, ಯಾವ ಬಸ್‌ಗಳಲ್ಲಿ ಉಚಿತ, ಶಕ್ತಿ ಸ್ಮಾರ್ಟ್ ಕಾರ್ಡ್ ಬಗ್ಗೆ ವಿವರಗಳು ಇಲ್ಲಿವೆ

ಬೆಂಗಳೂರು, ಜೂನ್. 05: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿದ್ದ ಶಕ್ತಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ "ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರ ಸೋಮವಾರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ 'ಶಕ್ತಿ ಸ್ಮಾರ್ಟ್​​ಕಾರ್ಡ್' ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಈ ಯೋಜನೆಯಲ್ಲಿ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಯೋಜನೆಗೆ ಸಂಬಂಧಿಸಿದ ಇತರ ವಿವರಗಳು ಹೀಗಿದೆ.

Shakti Scheme: Know about Shakti Scheme for free travel for women in Karnataka govt buses

"ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬೆಂ.ಮ.ಸಾ.ಸಂಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ.

ಪ್ರಸ್ತುತ ರಾಜ್ಯ ಸರ್ಕಾರದ "ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ಯ, ಅಲ್ಪ ಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ (Luxury) ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬೆಂ.ಮ.ಸಾ.ಸಂಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ (Express) ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದು.

Shakti Scheme: Know about Shakti Scheme for free travel for women in Karnataka govt buses

ಉಚಿತ ಪ್ರಯಾಣಕ್ಕೆ ಷರತ್ತುಗಳು ಹೀಗಿವೆ

* ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆಯು ಅನ್ವಯಿಸತಕ್ಕದ್ದು.

* ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಟೀವರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಟ್ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.

* ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್‌ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.

* ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, "ಶಕ್ತಿ ಸ್ಮಾರ್ಟ್ ಕಾರ್ಡ್"ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

* "ಶಕ್ತಿ ಸ್ಮಾರ್ಟ್ ಕಾರ್ಡ್"ನ್ನು ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್‌ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಸರ್ಕಾರ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+