'ಶಕ್ತಿ' ವಿದ್ಯಾರ್ಥಿನಿಯರ ಶೂನ್ಯ ಟಿಕೆಟ್ ದಾಖಲೆಗೆ ಆದೇಶ

ಬೆಂಗಳೂರು, ಜೂನ್ 21; ಕರ್ನಾಟಕದ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ 'ಶಕ್ತಿ' ಯೋಜನೆ ಜಾರಿಗೆ ಬಂದಿದೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕಚೇರಿ ಸುತ್ತೋಲೆಯೊಂದನ್ನು ಹೊರಡಿಸಿದೆ. ವಿದ್ಯಾರ್ಥಿನಿಯರ ಶೂನ್ಯ ಟಿಕೆಟ್ ದಾಖಲಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. 7/6/2023ರ ಆದೇಶ ಉಲ್ಲೇಖಿಸಲಾಗಿದೆ.

Shakti Scheme

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ/ ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸುತ್ತಿದ್ದು, ಅದರಂತೆ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ದಿನಾಂಕ 12/06/2023 ರಿಂದ ಗೋ-ಲೈವ್ ನೀಡಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವಿದ್ಯಾರ್ಥಿ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ದಿನಾಂಕ 30/06/2023 ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿರುತ್ತದೆ.
ಮುಂದುವರೆದು, ಸಾಮಾನ್ಯ ಸ್ಥಾಯಿ ಆದೇಶದನ್ವಯ ದಿನಾಂಕ 11/06/2023ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಹೇಳಿದೆ.

ಪಾಸ್ ಪಡೆಯುವುದು ಕಡ್ಡಾಯವಲ್ಲ; ಪ್ರಸ್ತುತ ರಾಜ್ಯದ ವಿದ್ಯಾರ್ಥಿನಿಯರಿಗೂ ಸಹ ಉಚಿತ ಪ್ರಯಾಣ ಸೌಲಭ್ಯ ವಿಸ್ತರಣೆಗೆ ಸರ್ಕಾರದ ನಿರ್ದೇಶನವಿದ್ದು, ಶಾಲಾ/ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಹಿಂದಿನ ವರ್ಷದ ಬಸ್ ಪಾಸ್ ಅಥವಾ ಶುಲ್ಕ ಪಾವತಿ ರಶೀದಿ ಆಧಾರದ ಮೇಲೆ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಾಗ 'ಶೂನ್ಯ ಟಿಕೆಟ್' ಅನ್ನು ಕಡ್ಡಾಯವಾಗಿ ವಿತರಿಸುವುದು ಎಂದು ತಿಳಿಸಿದೆ.

ವಿದ್ಯಾರ್ಥಿನಿಯರಿಗೆ ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವಾಗ 'ಶಕ್ತಿ' ಯೋಜನೆಯ ಬಗ್ಗೆ ಮಾಹಿತಿ ಬರಲಿದ್ದು, ವಿದ್ಯಾರ್ಥಿ ಬಸ್ ಪಾಸ್ ಪಡೆಯುವುದು ಕಡ್ಡಾಯವಿರುವುದಿಲ್ಲ. ಒಂದು ವೇಳೆ ನಿಯಮಾವಳಿಯನ್ವಯ 2023-24ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ ಅನ್ನು ಹೆಣ್ಣು ಮಕ್ಕಳು ಪಡೆದಿದ್ದಲ್ಲಿ, ಪಾಸಿನಲ್ಲಿ ನಮೂದಿಸಿದ ಮಾರ್ಗದಲ್ಲಿ ಮಾತ್ರ ಉಚಿತವಾಗಿ ಶೂನ್ಯ ಟಿಕೆಟ್ ಇಲ್ಲದೇ ಉಚಿತವಾಗಿ ಪ್ರಯಾಣಿಸಬಹುದು. ಇತರೆಡೆ ಪ್ರಯಾಣಿಸುವಾಗ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶೂನ್ಯ ಟಿಕೆಟ್ ವಿತರಿಸುವುದು.

ಅದರಂತೆ ಎಲ್ಲಾ ವಿದ್ಯಾರ್ಥಿನಿಯರಿಗೆ 'ಶೂನ್ಯ ಟಿಕೆಟ್' ವಿತರಿಸುವ ಸಂಬಂಧ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವಂತೆ ಹಾಗೂ ಈ ವಿಷಯದಲ್ಲಿ ಕೈಗೊಂಡ ಕ್ರಮದ ಬಗ್ಗೆ ಈ ಕಛೇರಿಗೆ ಅನುಸರಣಾ ವರದಿ ನೀಡುವಂತೆ ಕೋರಲಾಗಿದೆ ಎಂದು ಹೇಳಿದೆ.

ಅರ್ಜಿ ಸಲ್ಲಿಕೆ ಆರಂಭ; 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಶಾಲಾ-ಕಾಲೇಜುಗಳು ಆರಂಭಗೊಡಿವೆ. 'ಶಕ್ತಿ' ಯೋಜನೆಯಡಿ ವಿದ್ಯಾರ್ಥಿನಿಯರು ಉಚಿತವಾಗಿ ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ತೆರಳಬಹುದು. ಆದರೆ ವಿದ್ಯಾರ್ಥಿಗಳು ಬಸ್‌ ಪಾಸು ಪಡೆಯಬೇಕಿದೆ. ಪಾಸು ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ.

ವಿದ್ಯಾರ್ಥಿಗಳ ಬಸ್‌ ಪಾಸ್‌ಗಳ ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಾಥಮಿಕ ಶಾಲೆಗಳಿಂದ ಹಿಡಿದು ಸಂಜೆ ಕಾಲೇಜು/ ಪಿಎಚ್‌ಡಿ ಪದವಿ ತನಕ ವಿದ್ಯಾರ್ಥಿಗಳು ಬಸ್‌ ಪಾಸುಗಳನ್ನು ಪಡೆದು ಸಂಚಾರ ನಡೆಸಬಹುದು. ಅದಕ್ಕಾಗಿ ನಿಗದಿತ ಪಾಸುಗಳನ್ನು ಪಡೆಯಬೇಕಿದೆ. ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ.

ಬಸ್ ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕಗಳು ಇರುವುದಿಲ್ಲ. ಅಲ್ಲದೇ ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ. 30 ಸೇವಾ ಶುಲ್ಕವನ್ನು ಪಾವತಿ ಮಾಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+