ಶ್ಯಾಂ ಭಟ್‌ಗೆ ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆ, ಕಡತ ರಾಜಭವನಕ್ಕೆ

Posted By:
Subscribe to Oneindia Kannada

ಬೆಂಗಳೂರು, ಮೇ 23 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಶ್ಯಾಂ ಭಟ್ ಅವರು ಕೆಪಿಎಸ್‌ಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಕೆಪಿಎಸ್‌ಸಿಗೆ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರ ನೇಮಕದ ಶಿಫಾರಸನ್ನು ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿದೆ.

ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಗೆ ಶ್ಯಾಂ ಭಟ್, ಸದಸ್ಯ ಹುದ್ದೆಗೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಲಕ್ಷ್ಮೀ ನರಸಯ್ಯ, ಸಹಾಯಕ ವಾಣಿಜ್ಯ ತೆರಿಗೆ ಆಯುಕ್ತ ಸಯೀದ್ ಅಹಮದ್ ಅವರ ಹೆಸರನ್ನು ಶಿಫಾರಸು ಮಾಡಿ ಸೋಮವಾರ ರಾಜ್ಯಪಾಲರಿಗೆ ಕಳುಹಿಸಲಾಗಿದೆ. [KPSCಗೆ ಶ್ಯಾಂ ಭಟ್ ಅರ್ಹ ವ್ಯಕ್ತಿಯಲ್ಲ]

kpsc

1992ನೇ ಬ್ಯಾಚ್ ಐಎಎಸ್ ಅಧಿಕಾರಿ ಶ್ಯಾಂ ಭಟ್ ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ಯಾಂ ಭಟ್ ಅವರನ್ನು ಕೆಪಿಎಸ್‌ಸಿಗೆ ನೇಮಕ ಮಾಡಬಾರದು ಎಂಬ ಒತ್ತಾಯವೂ ಇದೆ. ಇದರ ನಡುವೆಯೇ ಸರ್ಕಾರ ಅವರ ಹೆಸರನ್ನು ಶಿಫಾರಸು ಮಾಡಿದೆ. [KPSC ಗೆ ಶ್ಯಾಂ ಭಟ್ ನೂತನ ಸಾರಥಿ]

ರಾಜ್ಯಪಾಲ ವಜುಭಾಯಿ ವಾಲಾ ಅವರು ಒಪ್ಪಿಗೆ ನೀಡಿದ ಬಳಿಕ ಶ್ಯಾಂ ಭಟ್ ಮತ್ತು ಇತರ ಇಬ್ಬರು ಸದಸ್ಯರ ನೇಮಕದ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ. ಇನ್ನೊಂದು ವಾರದಲ್ಲಿ ಈ ಕುರಿತು ಆದೇಶ ಪ್ರಟಕಗೊಳ್ಳುವ ನಿರೀಕ್ಷೆ ಇದೆ.

ಶ್ಯಾಂ ಭಟ್ ಅರ್ಹ ವ್ಯಕ್ತಿಯಲ್ಲ : ಮೈಸೂರಿನ ಪ್ರಜ್ಞಾವಂತ ಮತ್ತು ಕಾಳಜಿಯುಳ್ಳ ನಾಗರಿಕರ ವೇದಿಕೆ (ಎಸಿಐಸಿಎಂ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಶ್ಯಾಂ ಭಟ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬಾರದು ಎಂದು ಒತ್ತಾಯಿಸಿದೆ. ಶ್ಯಾಂ ಭಟ್ ಅವರು ಅಧ್ಯಕ್ಷ ಹುದ್ದೆಗೆ ಅರ್ಹರಾದ ವ್ಯಕ್ತಿಯಲ್ಲ ಎಂದು ವೇದಿಕೆ ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangalore Development Authority (BDA) commissioner is T. Sham Bhat is likely to be appointed chairman of the Karnataka Public Service Commission (KPSC). The State government has dispatched a file recommending Sham Bhat's name to the KPSC chairman post.
Please Wait while comments are loading...