ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ದಾವಣಗೆರೆ ಜಿಲ್ಲೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಇದೀಗ ಕರ್ನಾಟಕ ರಾಜಕೀಯ ಕ್ಷೇತ್ರ ಸೇರಿ ಇಡೀ ರಾಜ್ಯದಲ್ಲಿ ನೋವಿನ ಛಾಯೆ ಮೂಡುವಂತೆ ಮಾಡಿದೆ. ಇಡೀ ದೇಶದಲ್ಲೇ ಅತ್ಯಂತ ಹಿರಿಯ ಶಾಸಕರು ಎಂಬ ದಾಖಲೆ ಬರೆದಿದ್ದ, ಮಧ್ಯ ಕರ್ನಾಟಕ ರಾಜಕೀಯದಲ್ಲಿ ಬಿಗಿಯಾದ ಹಿಡಿತವನ್ನು ಹೊಂದಿದ್ದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಪರೀಕ್ಷೆಗಳೂ ಮುಂದೂಡಿಕೆ ಆಗಿದ್ದು & ದಾವಣಗೆರೆ ವಿವಿ ವ್ಯಾಪ್ತಿಯಲ್ಲಿ ಪರೀಕ್ಷೆ ಮುಂದೂಡಿಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿ ದೊಡ್ಡ ಹೆಸರು ಮಾಡಿದ್ದರು ಶಾಸಕ ಶಾಮನೂರು ಶಿವಶಂಕರಪ್ಪ ಅವರು. ಆದರೆ ದಿಢೀರ್ ಅವರ ಅಗಲಿಕೆ, ಸ್ನೇಹಿತರು & ಅಭಿಮಾನಿ ಬಳಗ ಸೇರಿದಂತೆ ಬೆಂಬಲಿಗರಿಗೆ ನೋವು ತಂದಿದೆ. ವಯೋಸಹಜ ಅನಾರೋಗ್ಯ ಸಮಸ್ಯೆ ಕಾರಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದು, ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ನಾಡು ಕಂಡ ಹಿರಿಯ ನಾಯಕ
ಕನ್ನಡ ನಾಡಿನ ರಾಜಕೀಯದಲ್ಲಿ ಹಾಗೂ ಉದ್ದಿಮೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಹೆಸರು ಕೇಳದೆ ಇರುವ ವ್ಯಕ್ತಿ ಇಲ್ಲ ಎನ್ನಬಹುದು. ಒಂದು ಕಡೆ ತಮ್ಮ ರಾಜಕೀಯ ಸಾಧನೆಗಳ ಜೊತೆಗೆ ಮತ್ತೊಂದು ಕಡೆ ಉದ್ದಿಮೆಗಳನ್ನೂ ಬೆಳೆಸಿ ಹೆಸರು ಮಾಡಿದ್ದು ಶಾಮನೂರು ಶಿವಶಂಕರಪ್ಪ ಅವರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇಷ್ಟು ಪ್ರಬಲವಾಗಿ ಬೆಳೆದು ನಿಲ್ಲಲು & ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠರಾಗಿ ನಿಂತ ನಾಯಕರಲ್ಲಿ ಶಾಮನೂರು ಶಿವಶಂಕರಪ್ಪ ಮುಂಚೂಣಿಯಲ್ಲಿ ಇರುವ ನಾಯಕರು.
ಸಾಲು ಸಾಲು ಆಘಾತಕಾರಿ ಸುದ್ದಿ
ಒಟ್ನಲ್ಲಿ ಕರ್ನಾಟಕ ರಾಜ್ಯದಲ್ಲಿ ಸಾಲು ಸಾಲು ಆಘಾತಕಾರಿ ಘಟನೆಗಳು ನಡೆದಿದ್ದು, ಇನ್ನೇನು ನಾವೆಲ್ಲಾ 2025 ವರ್ಷ ಮುಗಿಸಿ, 2026ನೇ ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಹೀಗಾಗಿ ಹೊಸ ವರ್ಷವನ್ನ ಬರಮಾಡಿಕೊಳ್ಳಲು ಕನ್ನಡಿಗರು ಸಕಲ ಸಿದ್ಧತೆ ನಡೆಸಿದ್ದರು. ಆದರೆ ಇಂತಹ ಸಮಯದಲ್ಲೇ ಈಗ ದಿಢೀರ್ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದ್ದು, ಕನ್ನಡ ನಾಡು ಕಂಡ ಹಿರಿಯ ನಾಯಕ & ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರು 94ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications