ಶರಾವತಿ ಸಂತ್ರಸ್ತರಿಗೆ ಭೂಹಕ್ಕು; ಕಾಗೋಡು ತಿಮ್ಮಪ್ಪಗೆ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ: ಮಧು ಬಂಗಾರಪ್ಪ

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರವೇ ಮನೆಗೆ ಬರಲಿದೆ ಎಂದೂ ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಂದು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

Sharavathi Land Rights Rajyotsava Award for Kagodu Thimmappa at Home Madhu Bangarappa

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಹಿರಿಯ ನಾಯಕನಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಸೇವೆ ಅನುಕರಣೀಯವಾಗಿದೆ. ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ. ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದೆಂಬ ಹಿನ್ನೆಲೆಯಲ್ಲಿ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, "ಬೇಡ, ನಾನು ಹೇಗೋ ಬರುವೆ" ಎಂದು ಕಾಗೋಡು ತಿಮ್ಮಪ್ಪ ಅವರು ಹೇಳಿದ್ದಾರೆ.

ಕಾಗೋಡು ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ: ಮಧು ಬಂಗಾರಪ್ಪ

ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶರಾವತಿ ಸಂತ್ರಸ್ತರ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು

ಇನ್ನು ಸಚಿವ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಗೋಡು ತಿಮ್ಮಪ್ಪರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಸಂಬಂಧ ಸಮಗ್ರವಾಗಿ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದ್ದೇವೆ. ಸದ್ಯವೇ ಇದಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಶೀಘ್ರದಲ್ಲೇ ಅವರಿಗೆಲ್ಲಾ ಹಕ್ಕು ಪತ್ರ ದೊರೆಯುವಂತೆ ಮಾಡಿ, ನಿಮ್ಮ ಬಹುದಿನಗಳ ಕನಸು ಈಡೇರುವಂತೆ ಮಾಡುತ್ತೇವೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷ ನವೆಂಬರ್ 1ರಂದು ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ. ಈ ವರ್ಷದ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸಮಾಜಸೇವೆ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ಸಮಾಜವಾದಿ ಚಿಂತಕ, ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಕಾಗೋಡು ತಿಮ್ಮಪ್ಪ ಅವರ ಹೆಸರೂ ಸೇರಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಕ್ಕುಗಳಿಗಾಗಿ ಹೋರಾಡಿದ ಕಾಗೋಡು ತಿಮ್ಮಪ್ಪ ಅವರು, ಜನಪರ ಚಿಂತನೆ, ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ಸರಳ ಜೀವನದ ಮೂಲಕ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಅವರ ದೀರ್ಘಕಾಲದ ಸಾರ್ವಜನಿಕ ಸೇವೆ ಮತ್ತು ಹೋರಾಟದ ಬದುಕಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ ಎಂದಿದ್ದಾರೆ.

ಎಸ್‌ಸಿ‌ಎಸ್‌ಪಿ/ಟಿ‌ಎಸ್‌ಪಿ ಯೋಜನೆ: ಮೊಬೈಲ್ ಕ್ಯಾಂಟೀನ್ ವಿತರಣೆ

ಜಿಲ್ಲಾ ಆಯುಷ್ ಇಲಾಖೆ ಶಿವಮೊಗ್ಗ ಹಾಗೂ ಸರ್ಕಾರಿ ಆಯುರ್ವೇದ ಬೋಧನಾ ಆಸ್ಪತ್ರೆಯ ಜಿಲ್ಲಾ ಆಯುಷ್ ಅಧಿಕಾರಿಗಳ ನೂತನ ಕಟ್ಟಡವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಶನಿವಾರ ಉದ್ಘಾಟಿಸಿದ್ದಾರೆ.

ಶಿವಮೊಗ್ಗದ ಸರ್ಕಾರಿ ಆಯುರ್ವೇದ ಬೋಧನಾ ಆಸ್ಪತ್ರೆಯ ವಿದ್ಯಾರ್ಥಿನಿಯರ ವಸತಿನಿಲಯದ ಆವರಣದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದ್ದು, ಸಚಿವರು ಕಟ್ಟಡವನ್ನು ಉದ್ಘಾಟಿಸಿ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದರು. ಬಳಿಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್‌ಸಿ‌ಎಸ್‌ಪಿ/ಟಿ‌ಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್‌ಗಳನ್ನು ವಿತರಿಸಲಾಯಿತು. ಈ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮೊಬೈಲ್ ಕ್ಯಾಂಟಿನ್‌ಗಳು ನೆರವಾಗಲಿವೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+