• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಡಿಯೂರಪ್ಪ ಸಂಪುಟದಲ್ಲಿ ಏಕೈಕ ಮಹಿಳೆ, ಶಶಿಕಲಾ ಜೊಲ್ಲೆಗೆ ಸಚಿವ ಸ್ಥಾನ

|
   ಕರ್ನಾಟಕದ ಏಕೈಕ ಮಹಿಳಾ ಸಚಿವೆ ಇವರೆ..? | Shashikala Jolle | Oneindia Kannada

   ಬೆಂಗಳೂರು, ಆಗಸ್ಟ್ 20 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮವಾಗಿದೆ. 2ನೇ ಬಾರಿ ನಿಪ್ಪಾಣಿ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸಚಿವರಾಗುತ್ತಿದ್ದಾರೆ.

   ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು

   ಒಟ್ಟು 17 ಶಾಸಕರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟಕ್ಕೆ ಸೇರುತ್ತಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ನಡೆಯಲಿದೆ. ಯಡಿಯೂರಪ್ಪ ಸಂಪುಟದಲ್ಲಿ ಒಬ್ಬರು ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

   Live Updates : ಯಡಿಯೂರಪ್ಪ ಸಂಪುಟ ಸೇರುವವರ ಹೆಸರು ಫೈನಲ್

   ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಶಶಿಕಲಾ ಜೊಲ್ಲೆ, 'ಬಹಳ ಸಂತೋಷವಾಗಿದೆ, ಹದಿನೇಳು ಜನರಲ್ಲಿ ನನಗೂ ಸ್ಥಾನ ನೀಡಲಾಗಿದೆ. ಮಹಿಳೆಯರ ಅಭಿವೃದ್ಧಿ ಹಾಗೂ ಪ್ರವಾಹದಿಂದ ನಲುಗಿರುವ ಬೆಳಗಾವಿ ಭಾಗಕ್ಕೆ ಸಹಾಯಕವಾಗುವಂತೆ ಕೆಲಸ ಮಾಡುತ್ತೇನೆ" ಎಂದರು.

   ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಒಲಿದು ಬಂದ ಸಚಿವ ಸ್ಥಾನ!

   "ನನಗೆ ಸ್ಥಾನಮಾನ ಸಿಗುವ ಬಗ್ಗೆ ವಿಶ್ವಾಸವಿತ್ತು. ಇದರಿಂದಾಗಿ ಖುಷಿಯ ಜೊತೆ ಜವಾಬ್ದಾರಿಯೂ ಹೆಚ್ಚಾಗಿದೆ. ಅನರ್ಹ ಶಾಸಕರು ಜೊತೆಗೆ ಇರುವುದರಿಂದ ಸವಾಲು ಹೆಚ್ಚಿದೆ" ಎಂದು ಶಶಿಕಲಾ ಜೊಲ್ಲೆ ಹೇಳಿದರು.

   ಪಕ್ಷೇತರ ಶಾಸಕ ಎಚ್.ನಾಗೇಶ್‌ಗೆ ಮತ್ತೆ ಮಂತ್ರಿಗಿರಿ ಭಾಗ್ಯ

   2018ರ ವಿಧಾನಸಭೆ ಚುನಾವಣೆಯಲ್ಲಿ ಶಶಿಕಲಾ ಜೊಲ್ಲೆ 87,006 ಮತಗಳನ್ನು ಪಡೆದು ಕಾಂಗ್ರೆಸ್‌ನ ಪಾಂಡುರಂಗ ಪಾಟೀಲ್‌ರನ್ನು ಸೋಲಿಸಿ 2ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

   ಶಶಿಕಲಾ ಜೊಲ್ಲೆ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ 2019ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.

   English summary
   Shashikala Jolle MLA of Nippani will join Chief Minister B.S.Yediyurappa cabinet on August 20, 2019. Shashikala Jolle only one women candidate in cabinet.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X