ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಬಂದ್?
Recommended Video

ಬೆಂಗಳೂರು, ಆಗಸ್ಟ್ 20 : ಮಳೆ ಗುಡ್ಡ ಕುಸಿತದಿಂದಾಗಿ ಶಿರಾಡಿ ಘಾಟ್ ರಸ್ತೆ ಹಾಳಾಗಿದೆ. ಮುಂದಿನ 3 ರಿಂದ 4 ತಿಂಗಳುಗಳ ಕಾಲ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈ ಕುರಿತು ಮಾಹಿತಿ ನೀಡಿದ್ದಾರೆ. 'ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣವಾದ ಬಳಿಕ ಜೋರು ಮಳೆಯಾಗಿದೆ. ಅನೇಕ ಕಡೆಗಳಲ್ಲಿ ಗುಡ್ಡ ಕುಸಿದಿದೆ. ಆದ್ದರಿಂದ, ಶಿರಾಡಿ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ಕಷ್ಟ' ಎಂದರು.
'ಮುಂದಿನ 3 ರಿಂದ 4 ತಿಂಗಳ ಕಾಲ ಭಾರಿ ವಾಹನಗಳ ಸಂಚಾರ ಕಷ್ಟ. ಆದ್ದರಿಂದ, ವಾಹನ ಸಂಚಾರ ನಿಷೇಧಿಸುವ ಪ್ರಸ್ತಾಪವಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

'ಹಾಸನ ಮತ್ತು ಕೊಡಗಿನಲ್ಲಿ ಮಳೆ ಹಾನಿ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 150 ಕೋಟಿ ನಷ್ಟವಾಗಿದೆ. 139 ಕೋಟಿ ರೂ. ರಸ್ತೆ ಹಾನಿಯಾಗಿದೆ. 8 ಕೋಟಿ ವೆಚ್ಚದ ಸೇತುವೆ ಹಾನಿಯಾಗಿದೆ' ಎಂದು ಮಾಹಿತಿ ನೀಡಿದರು.
'ಮಳೆ ಹೀಗೆ ಮುಂದುವರೆದರೆ ಮತ್ತಷ್ಟು ಹಾನಿಯಾಗುವ ಸಂಭವವಿದೆ. ಮಳೆ ನಿಂತ ಬಳಿಕ ರಸ್ತೆ ದುರಸ್ಥಿ ಕಾರ್ಯವನ್ನು ಆರಂಭಿಸಲಾಗುತ್ತದೆ' ಎಂದು ಎಚ್.ಡಿ.ರೇವಣ್ಣ ತಿಳಿಸಿದರು.












Click it and Unblock the Notifications