ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗತ್ಯವಿದ್ದರೆ ಶೀರೂರು ಶ್ರೀಗಳ ಸಾವಿನ ಬಗ್ಗೆ ತನಿಖೆ : ಕುಮಾರಸ್ವಾಮಿ

By Gururaj
|
Google Oneindia Kannada News

ಬೆಂಗಳೂರು, ಜುಲೈ 19 : 'ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರ ಸಾವಿನ ಬಗ್ಗೆ ಅಗತ್ಯ ಎನಿಸಿದರೆ ತನಿಖೆಗೆ ಅದೇಶ ನೀಡಲಾಗುತ್ತದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಕೆಲವು ವ್ಯಕ್ತಿಗಳು ಲಕ್ಷ್ಮೀವರ ತೀರ್ಥರ ಸಾವು ಅಸಹಜ ಎಂದು ಹೇಳುತ್ತಿದ್ದಾರೆ. ಅಗತ್ಯ ಎಂದು ಅನ್ನಿಸಿದರೆ ತನಿಖೆಗೆ ಆದೇಶಿಸುತ್ತೇವೆ' ಎಂದರು.

ಶೀರೂರು ಸ್ವಾಮೀಜಿ ಸಾವಿಗೂ ಮುನ್ನ ಹಾಗೂ ನಂತರದ 10 ಘಟನಾವಳಿಶೀರೂರು ಸ್ವಾಮೀಜಿ ಸಾವಿಗೂ ಮುನ್ನ ಹಾಗೂ ನಂತರದ 10 ಘಟನಾವಳಿ

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಲಕ್ಷ್ಮೀವರ ತೀರ್ಥರ ಸಾವಿಗೆ ವಿಷ ಪ್ರಾಶನ ಕಾರಣ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ' ಎಂದು ಸ್ಪಷ್ಟಪಡಿಸಿದರು.

Shiroor Mutt death : If necessary we will order for probe says Kumarasway

ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರು ಗುರುವಾರ ಬೆಳಗ್ಗೆ ಮಣಿಪಾಲಿನ ಕಸ್ತೂರ ಬಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಸದ್ಯ, ಮರಣೋತ್ತರ ಪರೀಕ್ಷೆ ನಡೆಸಿ ಮಠದ ಸಿಬ್ಬಂದಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.

Breaking: ಶೀರೂರು ಶ್ರೀಗಳ ವಕೀಲರಿಂದ ಸ್ಫೋಟಕ ಮಾಹಿತಿBreaking: ಶೀರೂರು ಶ್ರೀಗಳ ವಕೀಲರಿಂದ ಸ್ಫೋಟಕ ಮಾಹಿತಿ

ಸಹಜ ಸಾವು : ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು, 'ಶೀರೂರು ಲಕ್ಷ್ಮೀವರ ತೀರ್ಥರ ಅಗಲಿಕೆ ದುಖಃ ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ.

'ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮೀಜಿಗಳನ್ನು ಯಾರೂ ಕೊಲೆ ಮಾಡುವುದಿಲ್ಲ. ಅರದ್ದು ಕೊಲೆ ಎಂಬುದು ಶುದ್ಧ ಸುಳ್ಳು. ಅವರದು ಸಹಜ ಸಾವು, ಸಾವಿನ ಬಗ್ಗೆ ಸಂಶಯ ಪಡುವುದು ಸರಿಯಲ್ಲ' ಎಂದರು.

English summary
Karnataka Chief Minister H.D.Kumaraswamy said that, If necessary we will order for an enquiry into the death of Shiroor Mutt Lakshmivara Theertha Swamiji.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X