ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಫೆಬ್ರವರಿ 21 : 'ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಎಚ್.ಎನ್.ನಿರಂಜನ್ ಅವರಿಗೆ ಟಿಕೆಟ್ ನೀಡಲಾಗಿದೆ. ಅವರನ್ನು ಗೆಲ್ಲಿಸಲು ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು' ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಹೇಳಿದರು.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 'ಶನಿವಾರ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ವರಿಷ್ಟರು ರಾಜ್ಯದ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ' ಎಂದರು.

ಆರ್.ಎಂ.ಮಂಜುನಾಥ ಗೌಡ ಸಂದರ್ಶನಆರ್.ಎಂ.ಮಂಜುನಾಥ ಗೌಡ ಸಂದರ್ಶನ

'ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ಕ್ಷೇತ್ರ ಹೊರತುಪಡಿಸಿ ಉಳಿದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಒಟ್ಟಾಗಿ ಕೆಲಸ ಮಾಡಬೇಕು' ಎಂದು ಶ್ರೀಕಾಂತ್ ಕರೆ ನೀಡಿದರು.

ಜೆಡಿಎಸ್ ಮೊದಲ ಪಟ್ಟಿ : ರೆಬಲ್ ಶಾಸಕರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ!ಜೆಡಿಎಸ್ ಮೊದಲ ಪಟ್ಟಿ : ರೆಬಲ್ ಶಾಸಕರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ!

'ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಪಕ್ಷದ ಹಲವಾರು ಯೋಜನೆ ಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಲಾಗುವುದು' ಎಂದು ಪಕ್ಷದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಎಚ್.ಎನ್.ನಿರಂಜನ್ ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

2013ರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 3 ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷ ತಂತ್ರ ರೂಪಿಸಿದೆ.

ಶಿಕಾರಿಪುರ – ಎಚ್.ಟಿ.ಬಳಿಗಾರ್

ಶಿಕಾರಿಪುರ – ಎಚ್.ಟಿ.ಬಳಿಗಾರ್

ಶಿಕಾರಿಪುರ ಕ್ಷೇತ್ರಕ್ಕೆ ಎಚ್.ಟಿ.ಬಳಿಗಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. 2013ರ ಚುನಾವಣೆಗೂ ಸ್ಪರ್ಧಿಸಿದ್ದ ಅವರು 15007 ಮತಗಳನ್ನು ಪಡೆದಿದ್ದರು. ಶಿಕಾರಿಪುರ ಬಿಜೆಪಿ ಅಧ್ಯಕ್ಷ ಮತ್ತು 2018ರ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ.

ಭದ್ರಾವತಿ - ಅಪ್ಪಾಜಿ ಗೌಡ

ಭದ್ರಾವತಿ - ಅಪ್ಪಾಜಿ ಗೌಡ

ಭದ್ರಾವತಿ ಕ್ಷೇತ್ರದಲ್ಲಿ ಎಂ.ಜೆ.ಅಪ್ಪಾಜಿ ಗೌಡ ಅವರು ಅಭ್ಯರ್ಥಿಯಾಗಿದ್ದಾರೆ. ಇವರು ಕ್ಷೇತ್ರದ ಹಾಲಿ ಶಾಸಕರು. 2013ರ ಚುನಾವಣೆಯಲ್ಲಿ 78,370 ಮತಗಳನ್ನು ಪಡೆದು ಜಯಗಳಿಸಿದ್ದರು.

ಸೊರಬ - ಮಧು ಬಂಗಾರಪ್ಪ

ಸೊರಬ - ಮಧು ಬಂಗಾರಪ್ಪ

ಸೊರಬ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರು ಅಭ್ಯರ್ಥಿಯಾಗಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಅವರೇ. 2013ರ ಚುನಾವಣೆಯಲ್ಲಿ ಎಸ್.ಮಧು ಬಂಗಾರಪ್ಪ ಅವರು 58,541 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ - ಶಾರದಾ ಪೂರ್ಯನಾಯ್ಕ್

ಶಿವಮೊಗ್ಗ ಗ್ರಾಮಾಂತರ - ಶಾರದಾ ಪೂರ್ಯನಾಯ್ಕ್

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಶಾರದಾ ಪೂರ್ಯನಾಯ್ಕ್ ಅಭ್ಯರ್ಥಿಯಾಗಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಇವರೇ. 2013ರ ಚುನಾವಣೆಯಲ್ಲಿ 48,639 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ತೀರ್ಥಹಳ್ಳಿ - ಆರ್.ಎಂ.ಮಂಜುನಾಥ ಗೌಡ

ತೀರ್ಥಹಳ್ಳಿ - ಆರ್.ಎಂ.ಮಂಜುನಾಥ ಗೌಡ

ತೀರ್ಥಹಳ್ಳಿ ಕ್ಷೇತ್ರಕ್ಕೆ ಆರ್.ಎಂ.ಮಂಜುನಾಥ ಗೌಡ ಅಭ್ಯರ್ಥಿಯಾಗಿದ್ದಾರೆ. ಜನವರಿ 23ರಂದು ಬೆಂಗಳೂರಿನಲ್ಲಿ ಆರ್.ಎಂ.ಮಂಜುನಾಥ ಗೌಡ ಅವರು ಜೆಡಿಎಸ್ ಸೇರಿದ್ದರು. ಫೆ.12ರಂದು ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಶಿವಮೊಗ್ಗ - ಎಚ್.ಎನ್.ನಿರಂಜನ್

ಶಿವಮೊಗ್ಗ - ಎಚ್.ಎನ್.ನಿರಂಜನ್

ಶಿವಮೊಗ್ಗ ನಗರ ಕ್ಷೇತ್ರದಿಂದ ಎಚ್.ಎನ್.ನಿರಂಜನ್ ಅವರಿಗೆ ಟಿಕೆಟ್ ನೀಡಲಾಗಿದೆ.

English summary
Karnataka JD(S) announced 1st list of candidates name for 2018 assembly elections 2018. In Shivamoga district out of 7 assembly constituency candidates announced for 6 constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X