Breaking; ಖ್ಯಾತ ವೈದ್ಯ ಧನಂಜಯ ಸರ್ಜಿ ಬಿಜೆಪಿ ಸೇರ್ಪಡೆ

ಬೆಂಗಳೂರು, ಡಿಸೆಂಬರ್ 04; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು.

ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು.

Shivamogga Doctor Dhananjaya Sarji Joins BJP

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಡಾ. ಧನಂಜಯ ಸರ್ಜಿ, "ನನ್ನ ಸಾಮಾಜಿಕ ಹಾಗೂ ರಾಜಕೀಯ ಜೀವನಕ್ಕೆ ವಾಜಪೇಯಿ, ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರ ಜೀವನವೇ ಪ್ರೇರಕ" ಎಂದರು.

"ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ಅಭಿವೃದ್ಧಿಯತ್ತ ಸಾಗಿದ ಭಾರತ ಈಗ ನರೇಂದ್ರ ಮೋದಿ ನಾಯಕತ್ವದಲ್ಲಿ ಉನ್ನತಿಯತ್ತ ಸಾಗುತ್ತಿದೆ" ಎಂದು ಹೇಳಿದರು.

"ಕರ್ನಾಟಕದ ಮಟ್ಟಿಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಾಯಕತ್ವ ಪ್ರೇರಕ ಶಕ್ತಿಯಾಗಿದೆ. ಅವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳು ಅವರ ರಾಜಕೀಯ, ಸಾಮಾಜಿಕ ಇಚ್ಛಾಶಕ್ತಿಗೆ ಸಾಕ್ಷಿಯಾಗಿವೆ" ಎಂದು ತಿಳಿಸಿದರು.

"ದಾವಣಗೆರೆ ಶಿವಮೊಗ್ಗಕ್ಕಿಂತ ದೊಡ್ಡ ನಗರ. ಆದರೆ ಅಭಿವೃದ್ಧಿ ವಿಚಾರದಲ್ಲಿ ಶಿವಮೊಗ್ಗ ಮುಂದಿದೆ. ಇದಕ್ಕೆ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಕೆಲಸಗಳು ಕಾರಣ" ಎಂದು ಬಣ್ಣಿಸಿದರು.

ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ; ಮಾಜಿ ಸಂಸದ ಕೆ. ಜಿ. ಶಿವಪ್ಪ ಪುತ್ರ ಕೆ. ಎಸ್. ಪ್ರಶಾಂತ್ ಭಾನುವಾರ ಬಿಜೆಪಿ ಸೇರಿದರು. ಕೆಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದರು.

ಸಾಗರ ಕ್ಷೇತ್ರದ ಬಿಜೆಪಿ ಶಾಸಕರು ಹಾರತಾಳು ಹಾಲಪ್ಪ. ಮುಂದಿನ ಚುನಾವಣೆಯಲ್ಲಿ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ಸಿಗಲಿದೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+