Shivamogga: ಈದ್ ಮಿಲಾದ್ ವೇಳೆ ಕಲ್ಲು ತೂರಾಟ, 144 ಸೆಕ್ಷನ್ ಜಾರಿ, ಹಲವರ ಬಂಧನ
ಶಿವಮೊಗ್ಗ, ಅಕ್ಟೋಬರ್ 01: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಮೊನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿ ಯುವಕರ ಗುಂಪು ಪೊಲೀಸರ ಮೇಲೆ ಕಲ್ಲು ಎಸೆದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಕಳೆದ ತಿಂಗಳು 28ರಂದು ಗುರುವಾರ ಈದ್ ಮಿಲಾದ್ ಅನ್ನು ಮುಸಲ್ಮಾನು ಅದ್ಧೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ ಮತ್ತು ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆದಿತ್ತು. ಈ ವೇಳೆ ರಾಗಿಗುಡ್ಡದಲ್ಲಿ ಸಾವಿರಾರು ಮುಸ್ಲಿಂರು ಪಾಲ್ಗೊಂಡಿದ್ದರು.

ಈ ವೇಳೆ ಪುಂಡರ ಗುಂಡ ಪೊಲೀಸರ ಮೇಲೆ ಕಲ್ಲೆದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪೊಲೀಸರು ಕಲ್ಲೆಸೆದ ಸುಮಾರು 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಹಲವರಿಗಾಗಿ ಶೋಧ ನಡೆದಿದೆ. ಸದ್ಯ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಈದ್ ಮಿಲಾದ್ ಆಚರಣೆ ವೇಳೆ ಕಲ್ಲೆಸೆತ ಘಟನೆ ತಿಳಿದು ಬರುತ್ತಿದ್ದಂತೆ ಪೊಲೀಸರ ವಿಶೇಷ ತಂಡ ಸ್ಥಳಕ್ಕೆ ಧಾವಿಸಿ, ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿತು. ಸ್ಥಳಕ್ಕೆ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ಮಾಡಿ ಪರಿಶೀಲಿಸಿದರು. ಶಾಂತಿನಗರದ ರಾಗಿಗುಡ್ಡದಲ್ಲಿ ಪುಂಡರ ಮೆಲೆ ಲಘು ಲಾಠಿ ಪ್ರಹಾರ ನಡೆಸಲಾಯಿತು.
ಘಟನೆ ಬಳಿಕ ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ನಿಷೇಧಾಜ್ಞೆ ಜಾರಿ ಮಾಡಲಾಯಿತು. ನಂತರ ಕಲ್ಲು ತೂರಿದ್ದವರನ್ನು ಪೊಲೀಸರು ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಒಬ್ಬೊಬ್ಬರನ್ನೇ ಬಂಧಿಸಿ ವಶಕ್ಕೆ ಪಡೆಯುತ್ತಿದ್ದಾರೆ. ಸದ್ಯ ಶಿವಮೊಗ್ಗದ ಈ ಭಾಗ ಬೂದಿ ಮುಚ್ಚಿದ ಕೆಂಡದಂತಿದೆ.












Click it and Unblock the Notifications