ಸರ್ಕಾರಿ ಶಾಲೆಗಳ LKG-UKGಗೆ ಈ ಜಿಲ್ಲೆಯಲ್ಲಿ ಭಾರಿ ಡಿಮಾಂಡ್: ಮೊದಲ ವರ್ಷವೇ 14 ಸಾವಿರಕ್ಕೂ ಹೆಚ್ಚು ಮಕ್ಕಳು ದಾಖಲು

ಶಿವಮೊಗ್ಗ: ಖಾಸಗಿ ಇಂಗ್ಲೀಷ್‌ ಮಾಧ್ಯಮ ಶಾಲೆಗಳ ದುಬಾರಿ ಶುಲ್ಕದಿಂದ ಬೇಸತ್ತದ್ದ ಪೋಷಕರು ನಿಧಾನಕ್ಕೆ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇತ್ತೀಚೆಗೆ ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಅಂದರೆ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವುದರ ಬಗ್ಗೆ ಈಗಾಗಲೇ ಎಲ್ಲರಿಗೂ ಗೊತ್ತೇ ಇದೆ. ಆದರೆ ಈ ಮಹತ್ವಪೂರ್ಣ ಯೋಜನೆ ಶಿವಮೊಗ್ಗ ಜಿಲ್ಲೆಯಲ್ಲಿ ಒಳ್ಳೆಯ ಸ್ಪಂದನೆ ದೊರಕಿದೆ.

ಹೌದು, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಶಿವಮೊಗ್ಗ ಒಂದೇ ಜಿಲ್ಲೆಯಲ್ಲಿ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳು ಹಾಗೂ ಮೇಲ್ದರ್ಜೆಗೇರಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟಿನಲ್ಲಿ 14,000ಕ್ಕೂ ಹೆಚ್ಚು ಮಕ್ಕಳು ದಾಖಲಾತಿ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

Government schools

ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷ 248 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸೇರಿದಂತೆ 161 ಶಾಲೆಗಳಲ್ಲಿ ಈಗಾಗಲೇ ತರಗತಿಗಳು ಯಶಸ್ವಿಯಾಗಿ ಆರಂಭಗೊಂಡಿದ್ದು, 6,082 ಮಕ್ಕಳು ಪ್ರವೇಶ ಪಡೆದಿದ್ದಾರೆ. ಜಾಗದ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಶಿಕಾರಿಪುರದಲ್ಲಿ 47, ಸೊರಬದಲ್ಲಿ 17, ಸಾಗರ ಮತ್ತು ತೀರ್ಥಹಳ್ಳಿಯಲ್ಲಿ ತಲಾ 6, ಭದ್ರಾವತಿಯಲ್ಲಿ 5, ಶಿವಮೊಗ್ಗದಲ್ಲಿ 4 ಹಾಗೂ ಹೊಸನಗರದಲ್ಲಿ 2 ಸೇರಿದಂತೆ ಒಟ್ಟು 87 ಶಾಲೆಗಳಲ್ಲಿ ತರಗತಿಗಳು ಆರಂಭವಾಗಬೇಕಿದೆ. ಮುಂಬರುವ ದಿನಗಳಲ್ಲಿ ಮಂಜೂರಾಗಿರುವ ಎಲ್ಲಾ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ 2,563 ಅಂಗನವಾಡಿಗಳ ಪೈಕಿ ಮೂಲಸೌಕರ್ಯಗಳಿರುವ ಹಾಗೂ ಪದವೀಧರ ಕಾರ್ಯಕರ್ತೆಯರಿರುವ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ 100 ಅಂಗನವಾಡಿಗಳನ್ನು ಎಲ್‌ಕೆಜಿ-ಯುಕೆಜಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿತ್ತು.

ಪ್ರಸ್ತುತ ವರ್ಷ ಹೆಚ್ಚುವರಿಯಾಗಿ 350 ಕೇಂದ್ರಗಳನ್ನು ಸೇರಿಸಿ ಒಟ್ಟು 450 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲಾಗಿದ್ದು, 8,074 ಮಕ್ಕಳು ದಾಖಲಾಗಿದ್ದಾರೆ. ಮಕ್ಕಳಿಗೆ ಅಗತ್ಯವಿರುವ ಸಮವಸ್ತ್ರ, ಪಠ್ಯಪುಸ್ತಕಗಳು, ಆಟಿಕೆಗಳು ಹಾಗೂ ಕುಳಿತುಕೊಳ್ಳಲು ಮೇಜು-ಕುರ್ಚಿಗಳ ವ್ಯವಸ್ಥೆಯನ್ನ ಕಲ್ಪಿಸಲಾಗುತ್ತಿದೆ.

ಎಲ್‌ಕೆಜಿ ಯುಕೆಜಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ

ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳ ಪೌಷ್ಟಿಕಾಂಶದ ಕೊರತೆ ನೀಗಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.

ಇದುವರೆಗೆ 1 ರಿಂದ 10ನೇ ತರಗತಿ ಮಕ್ಕಳಿಗೆ ಸೀಮಿತವಾಗಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನ ಈ ಪೂರ್ವ ಪ್ರಾಥಮಿಕ ಮಕ್ಕಳಿಗೂ ವಿಸ್ತರಿಸಲಾಗುತ್ತಿದೆ. ಪಿಎಂ-ಪೋಷಣ್ ಯೋಜನೆಯಡಿ ಬಿಸಿಯೂಟದ ಜೊತೆಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು, ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ. ಬಿಸಿಯೂಟದ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಭರಿಸುತ್ತಿದ್ದು, ಹಾಲು ಮತ್ತು ಮೊಟ್ಟೆಯ ವೆಚ್ಚವನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ.

ಪೋಷಕರಿಗೆ ನೆಮ್ಮದಿ

ಇಂಗ್ಲೀಷ್‌ ಕಲಿಕೆಯ ಆಸೆಯಿಂದ ಖಾಸಗಿ ಶಾಲೆಗಳಿಗೆ ಸಾಲ ಮಾಡಿ ಮಕ್ಕಳನ್ನು ಸೇರಿಸುತ್ತಿದ್ದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸರ್ಕಾರದ ಈ ಯೋಜನೆ ದೊಡ್ಡ ಮಟ್ಟದ ಆರ್ಥಿಕ ನೆಮ್ಮದಿ ನೀಡಿದೆ. ಪ್ರಸ್ತುತ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಕಾಯಂ ಶಿಕ್ಷಕರ ನೇಮಕಾತಿ ಇಲ್ಲದಿದ್ದರೂ, ನೂರಾರು ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನ ನೇಮಿಸಿಕೊಂಡು ಬೋಧನೆ ನಡೆಸಲಾಗುತ್ತಿದೆ. ಅಂಗನವಾಡಿಗಳಲ್ಲಿ ಪದವೀಧರ ಕಾರ್ಯಕರ್ತೆಯರೇ ಮಕ್ಕಳಿಗೆ ಆಟದ ಮೂಲಕ ಪಾಠ ಹೇಳಿಕೊಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+