ಶಿವಮೊಗ್ಗ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ
ಬೆಂಗಳೂರು, ಫೆ.23: ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಚಿವರು ಬುಧವಾರ ಸಂಜೆ ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದರು.
Koo Appನಮ್ಮ ಸಂಘ ಪರಿವಾರದ ಯುವ ಕಾರ್ಯಕರ್ತ ಹರ್ಷ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ನೋವು ನಮ್ಮೆಲ್ಲರ ನೋವಾಗಿದೆ. ಡಾ. ಅಶ್ವತ್ಥನಾರಾಯಣ ಫೌಂಡೇಷನ್ ವತಿಯಿಂದ ಹರ್ಷ ಅವರ ಕುಟುಂಬಕ್ಕೆ ₹10,00,000 ನೀಡಲಿದ್ದೇವೆ. ಅವರ ತಾಯಿ ಹಾಗೂ ಕುಟುಂಬದ ಸದಸ್ಯರ ಜತೆ ಮಾತನಾಡಿ ಎಲ್ಲಾ ಸಂಕಷ್ಟಗಳಿಗೆ ಆಸರೆಯಾಗಿ ನಿಲ್ಲುವ ಭರವಸೆ ನೀಡಿದ್ದೇನೆ. #ಹರ್ಷಅಮರ - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 23 Feb 2022
ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು,' ಎಂದಿದ್ದಾರೆ.

ಬಿಜೆಪಿ ಸರಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆಯಾಗಿದೆ. ಸಮಾಜವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ. ಈ ಘಟನೆಯ ಹಿಂದೆ ಯಾರಾರಿದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು' ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.












Click it and Unblock the Notifications